ಕರ್ನಾಟಕ

karnataka

ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದು, ಹೊಸದಾಗಿ ಏನನ್ನೂ ಸೇರಿಸೋ ಅವಶ್ಯಕತೆ ಇಲ್ಲ: ಡಿಕೆಶಿ

By

Published : Mar 18, 2022, 2:08 PM IST

ಎಲ್ಲ ತಿಳಿದವರೇ ಸೇರಿ ಪಠ್ಯ ಕ್ರಮ ರಚನೆ ಮಾಡಿದ್ದು, ಹೊಸದಾಗಿ ಏನನ್ನೂ ಸೇರಿಸೋ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರ ಬಗ್ಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್
ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಈಗಾಗಲೇ ಭಗವದ್ಗೀತೆ, ರಾಮಾಯಣ ಸೇರಿದಂತೆ ಇತರ ಧರ್ಮದ ವಿಚಾರಗಳು ಪಠ್ಯದಲ್ಲಿ ಇವೆ. ಹೊಸದಾಗಿ ವೈಭವಿಕರಿಸುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಆರಂಭದಲ್ಲೇ ನಾನು ಎನ್​ಇ ಪಿ ವಿರೋಧ ಮಾಡಿರುವವನು. ಎಲ್ಲ ತಿಳಿದವರೇ ಸೇರಿ ಪಠ್ಯ ಕ್ರಮ ರಚನೆ ಮಾಡಿದ್ದಾರೆ. ಹೊಸದಾಗಿ ಏನನ್ನೂ ಸೇರಿಸುವ ಅವಶ್ಯಕತೆ ಇಲ್ಲ. ಎಲ್ಲ ಧರ್ಮದ ಆಚಾರ - ವಿಚಾರಗಳನ್ನು ಜನ ತಿಳಿದುಕೊಳ್ಳುವುದರಲ್ಲಿ ತಪ್ಪಿಲ್ಲ ಎಂದು ಭಗವದ್ಗೀತೆಯನ್ನ ಪಠ್ಯಕ್ಕೆ ಸೇರಿಸುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್

ಹನುಮಂತಯ್ಯ ಮುಖ್ಯಮಂತ್ರಿ ಆಗಿದ್ದಾಗಲೇ ಎರಡು ರೂಪಾಯಿಗೆ ಭಗವದ್ಗೀತೆ ಪುಸ್ತಕ ಕೊಟ್ಟಿದ್ದರು. ಈಗ ಇವರು ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಇವರು ಹೊಸದಾಗಿ, ದೊಡ್ಡದಾಗಿ ಏನು ಮಾಡಬೇಕಾಗಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:ದಂಪತಿಯಾಗಿ ಮೊದಲ ಹೋಳಿ ಆಚರಿಸಿಕೊಂಡ ಕತ್ರಿನಾ-ವಿಕ್ಕಿ

ABOUT THE AUTHOR

...view details