ಮೈಸೂರು:ಯುವ ದಸರಾದಲ್ಲಿ ಚಂದನ್ ಶೆಟ್ಟಿ ನಡೆದುಕೊಂಡ ರೀತಿ ಸರಿಯಲ್ಲ, ಸಂಸ್ಕೃತಿಯೇ ಇಲ್ಲದೇ ನಡೆದುಕೊಂಡಿದ್ದಕ್ಕೆ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.
ತಮ್ಮ ಹಾಡುಗಳಿಂದ ಯುವಜನತೆಯ ಮನ ಗೆದ್ದಿರುವ ಚಂದನ್ ಶೆಟ್ಟಿ ಹಾಗೂ ರಿಯಾಲಿಟಿ ಶೋ ಮೂಲಕ ಪರಿಚಿತವಾದ ನಿವೇದಿತಾ ಗೌಡಗೆ ಯುವದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ ಘಟನೆ ತೀವ್ರ ಟೀಕೆಗೆ ಗುರಿಯಾಗಿದೆ.
ದಸರಾ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಚಿತ್ರ ಸಂತೆ ಹಾಗೂ ಹಸಿರು ಸಂತೆ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸೋಮಣ್ಣ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ರೀತಿ ನಡೆದುಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಹಬ್ಬದಲ್ಲಿ ಇಂಥ ಘಟನೆ ಸಂಭವಿಸಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದರು.