ಕರ್ನಾಟಕ

karnataka

ETV Bharat / state

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಸಿಎಂ ಯಡಿಯೂರಪ್ಪ ಸೂಚನೆ

ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕು ನಿವಾರಿಸಿ, ಕಾಮಗಾರಿ ಚುರುಕುಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

dfsd
ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಯಡಿಯೂರಪ್ಪ ಸೂಚನೆ

By

Published : Jun 23, 2020, 4:46 PM IST

ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕು ನಿವಾರಿಸಿ, ಕಾಮಗಾರಿ ಚುರುಕುಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಯಡಿಯೂರಪ್ಪ ಸೂಚನೆ

ಕೋಲಾರ ಜಿಲ್ಲೆಯ ಶಾಸಕರ ನಿಯೋಗ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿತು. ಕೆ.ಸಿ. ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂ.ಎಲ್​.ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಿದೆ.

ಪ್ರಸ್ತುತ ಕೇವಲ 284 ಎಂ ಎಲ್ ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚಿನ ನೀರು ಲಭ್ಯವಾಗಿಸಲು ಜಲ ಮಂಡಳಿ ಕ್ರಮ ವಹಿಸುವಂತೆ ಸಿಎಂ ಸೂಚಿಸಿದರು. ಅಲ್ಲದೆ ಎಸ್​ಟಿಪಿಗಳ ಸಾಮರ್ಥ್ಯ ವರ್ಧನೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಈ ವೇಳೆ ಕೆಲ ಸಚಿವರು, ಅಧಿಕಾರಿಗಳು ಮತ್ತು ಕೋಲಾರ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

ABOUT THE AUTHOR

...view details