ಬೆಂಗಳೂರು: ಲಾಕ್‌ಡೌನ್ 4.O ದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿದ್ದು, ಎಲ್ಲಾ ವೃಂದದ ಶೇ.100 ರಷ್ಟು ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ನೀಡಿದ್ದಾರೆ.
ಶೇ.100 ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ: ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ - bangalore news
ನಾಳೆಯಿಂದ ಕಂಟೇನ್ಮೆಂಟ್ ಝೋನ್ ಬಿಟ್ಟು ಉಳಿದೆಡೆ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿದವೆ. ಹೀಗಾಗಿ ಎಲ್ಲಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ನೀಡಿದ್ದಾರೆ.
ವಿಧಾನಸೌಧ
ನಾಳೆಯಿಂದ ಕಂಟೇನ್ಮೆಂಟ್ ಝೋನ್ ಬಿಟ್ಟು ಉಳಿದೆಡೆ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿದೆ. ಈ ಮುಂಚೆ ಅಗತ್ಯ ಸೇವೆಗಳನ್ನು ಪೂರೈಸುವ ಇಲಾಖೆಗಳಲ್ಲಿ ಶೇ.100 ರಷ್ಟು ಎಲ್ಲಾ ವರ್ಗದ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತು ಇತರ ಇಲಾಖೆಗಳ ಶೇ.33 ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.
ಇದೀಗ ಲಾಕ್‌ಡೌನ್ ಸಡಿಲಿಸಲು ತೀರ್ಮಾನಿಸಲಾಗಿದ್ದು, ನಾಳೆಯಿಂದ ಎಲ್ಲಾ ಕಚೇರಿಗಳು ತೆರೆಯಲಿದ್ದು, ಶೇ.100 ರಷ್ಟು ಎ, ಬಿ, ಸಿ ಮತ್ತು ಡಿ ವೃಂದದ ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.