ಕರ್ನಾಟಕ

karnataka

ETV Bharat / state

ರಾಜ್ಯದ ಅರಶಿನ ಬೆಳೆ ಖರೀದಿಗೆ ಸೂಚನೆ, ರೈತರ ಸಮಸ್ಯೆಗೆ ಮೋದಿ ಸರ್ಕಾರ ಸ್ಪಂದನೆ: ಶೋಭಾ ಕರಂದ್ಲಾಜೆ - ETV Bharat kannada News

ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಿದರಿಗೆ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದಾರೆ.

Minister Shobha Karandlaje
ಸಚಿವೆ ಶೋಭಾ ಕರಂದ್ಲಾಜೆ

By

Published : Mar 22, 2023, 8:10 PM IST

ಬೆಂಗಳೂರು :ರಾಜ್ಯದಲ್ಲಿ ಅರಶಿನ ಬೆಳೆಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದು ರೈತರು ಕಣ್ಣೀರು ಇಡುವ ಪರಿಸ್ಥತಿ ಎದುರಾಗಿತ್ತು. ಈ ನಡುವೆ ಸದ್ಯ ರಾಜ್ಯದ ಅರಶಿನ ಬೆಳೆ ಖರೀದಿಗೆ ಸೂಚಿಸಿ ಬೆಳೆಗಾರರನ್ನು ಸಂಕಷ್ಟದಿಂದ ಪಾರಾಗಿದ್ದಾರೆ. ಇದಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ರೈತರನ್ನು ಪಾರು ಮಾಡಿದ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರಸಿಂಗ್ ತೋಮರ್ ಅವರಿಗೆ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅನಂತ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಾರುಕಟ್ಟೆಯಲ್ಲಿ ಅರಶಿನ ಬೆಳೆಯ ದರ ಕುಸಿತದ ಕಾರಣ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೇ ನನಗೆ ಮನವಿ ಸಲ್ಲಿಸಿತ್ತು. ಅಲ್ಲದೆ ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ ಮಾಡಿತ್ತು. ಜೊತೆಗೆ ಕರ್ನಾಟಕದ ಬಿಜೆಪಿ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘ್ರವಾಗಿ ಕೇಂದ್ರದಿಂದ ಆದೇಶ ಹೊರಡಿಸಿ, ಬಳಿಕ ಅರಿಸಿಣ ಬೆಳೆಯ ರೈತರ ಕಷ್ಟಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲಾಗಿದೆ ಎಂದು ತಿಳಿಸಿದರು.

ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸರ್ಕಾರ :2022-23ನೇ ಸಾಲಿಗೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಅರಶಿನ ಖರೀದಿಗೆ ಪ್ರತಿ ಕ್ವಿಂಟಲ್ ಗೆ ರೂ. 6,694/- ರಂತೆ ಅನುಮೋದನೆಯನ್ನು ಇಂದು ನೀಡಲಾಗಿದೆ. ತ್ವರಿತವಾಗಿ ರಾಜ್ಯ ಸರ್ಕಾರ ಅರಶಿನದ ಖರೀದಿ ಪ್ರಕ್ರಿಯೆ ಕೈಗೊಳ್ಳಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು. ಅರಶಿನ ಬೆಳೆಗೆ ಪ್ರಚಲಿತ ಮಾರುಕಟ್ಟೆ ದರ ರೂ. 5200 (ಪ್ರತಿ ಕ್ವಿಂಟಲ್ ಗೆ) ಇರುತ್ತದೆ. ಪ್ರಸ್ತುತ ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ರೂ. 6694/- (ಪ್ರತಿ ಕ್ವಿಂಟಲ್ ಗೆ) ಇರಲಿದೆ. ಆದುದರಿಂದ ರೈತರಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಿಂದ ಪ್ರತಿ ಕ್ವಿಂಟಲ್ ಗೆ, ಅಂದಾಜು ರು. 1400 ರಿಂದ ರೂ.1500 ಗಳಷ್ಟು ಲಾಭವಾಗುತ್ತದೆ. ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ರೈತರಿಗೆ ಕೇಂದ್ರ ಸರ್ಕಾರದ ಈ ಆದೇಶದಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ದೇಶದ ರೈತರ ಹಿತ ಕಾಯುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿದ್ದು, ಯಾವುದೇ ವಿಳಂಬಕ್ಕೆ ಅವಕಾಶವಿಲ್ಲದೆ ರಾಜ್ಯದ ಅರಶಿನ ಬೆಳೆಗಾರರ ಕಷ್ಟಕ್ಕೆ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸ್ಪಂದಿಸಿದೆ. ಇದಕ್ಕಾಗಿ ಧನ್ಯವಾದಗಳು ಎಂದು ಶೋಭಾ ಕರಂದ್ಲಾಜೆ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ :ಬಿಜೆಪಿಗೆ ಯಾರೇ ಬಂದರೂ ಸ್ವಾಗತಿಸುತ್ತೇವೆ, ಪಕ್ಷದಿಂದ ಸ್ವಾರ್ಥಕ್ಕೆ ಹೊರ ಹೋದ್ರೆ ತಡೆಯಲ್ಲ: ಶೋಭಾ ಕರಂದ್ಲಾಜೆ

ABOUT THE AUTHOR

...view details