ಬೆಂಗಳೂರು:ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕ, ಶುಲ್ಕ ಸೇರಿದಂತೆ ಇತರೆ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಬಹುದು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಸರ್ಕಾರ ಈ ಮೂಲಕ ಇಲಾಖೆಯ ಮಾನವ ಸಂಪನ್ಮೂಲಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದಿದ್ದಾರೆ. ಸರ್ಕಾರದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಆದೇಶದಿಂದ ಅಭ್ಯರ್ಥಿಗಳಿಗೆ ಖುಷಿ ನೀಡಿದೆ.