ಕರ್ನಾಟಕ

karnataka

ETV Bharat / state

ಎನ್.ಆರ್.ಸಂತೋಷ್ ಆರೋಗ್ಯದಲ್ಲಿ ಚೇತರಿಕೆ : ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಮಾಹಿತಿ - ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ರಾಮಯ್ಯ ಆಸ್ಪತ್ರೆಯಿಂದ ಮಾಹಿತಿ

ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನೆರಡು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

MS Ramaiah Hospital
ಎನ್.ಆರ್.ಸಂತೋಷ್

By

Published : Nov 28, 2020, 4:28 PM IST

ಬೆಂಗಳೂರು: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್‌.ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ರಾಮಯ್ಯ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಎನ್.ಆರ್.ಸಂತೋಷ್ ಆರೋಗ್ಯದಲ್ಲಿ ಚೇತರಿಕೆ..

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ, ಎನ್.ಆರ್.ಸಂತೋಷ್ ರನ್ನು ನಿನ್ನೆ ರಾತ್ರಿ 10 ಗಂಟೆಗೆ ರಾಮಯ್ಯ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ 8.30ಕ್ಕೆ ನಿದ್ರೆ ಮಾತ್ರೆ ಸೇವಿಸಿದ್ದಾರೆ ಎಂದು ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿಸಲಾಗಿದೆ.ಆಸ್ಪತ್ರೆಗೆ ದಾಖಲಾದ ವೇಳೆ ಅವರು ನಿದ್ರಾವಸ್ಥೆಯಲ್ಲಿದ್ದರು. ಉಳಿದಂತೆ ಎಲ್ಲವೂ ಸ್ಥಿರವಾಗಿತ್ತು. ಕೂಡಲೇ ಸೂಕ್ತ ಚಿಕಿತ್ಸೆ ನೀಡಲಾಯಿತು. ಅವರು ಈ ಮುಂಚೆಯೂ ನಿದ್ದೆ ಸಮಸ್ಯೆ ಹಿನ್ನೆಲೆ ಆಗಾಗ ನಿದ್ದೆ ಮಾತ್ರೆಗಳನ್ನು ಸೇವಿಸುತ್ತಿದ್ದರು ಎಂದು ವಿವರಿಸಲಾಗಿದೆ.

ಎನ್.ಆರ್.ಸಂತೋಷ್ ಆರೋಗ್ಯ ಸ್ಥಿರವಾಗಿದೆ. ಮುಂದಿನ ಎರಡು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ABOUT THE AUTHOR

...view details