ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ತಡೆಗಟ್ಟಲು ಬೂತ್, ವಾರ್ಡ್, ಕಂಟೈನ್‌ಮೆಂಟ್ ವಲಯಗಳಲ್ಲಿ ಹೆಚ್ಚೆಚ್ಚು ಕೊರೊನಾ ಪರೀಕ್ಷೆ ಅಗತ್ಯವಿದೆ. ಹೀಗಾಗಿ ಸಿಬ್ಬಂದಿಗಳ ಕೊರತೆಯಾಗಿದ್ದು, ಬಿಬಿಎಂಪಿ ಎನ್ಎಸ್ಎಸ್ ವಿದ್ಯಾರ್ಥಿಗಳನ್ನು ಬಳಸಿ ಗಂಟಲು ದ್ರವ ಸಂಗ್ರಹಕ್ಕೆ ನೆರವಾಗುವಂತೆ ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ.ಗಣನಾಥ ಶೆಟ್ಟಿಯವರಿಗೆ ಆಯುಕ್ತ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದಾರೆ.
ಈ ವೇಳೆ ವಿದ್ಯಾರ್ಥಿಗಳಿಗೆ ತಿಂಗಳಿಗೆ 14 ಸಾವಿರ ರೂಪಾಯಿ ಗೌರವ ಧನ ನೀಡುವುದಾಗಿ ಹೇಳಿದ್ದಾರೆ. ಅವರಿರುವ ವಾರ್ಡ್ಗಳಲ್ಲೇ ಕೆಲಸ ಮಾಡಲು ಸೂಚಿಸಲಾಗುವುದು. ಹೀಗಾಗಿ ಆದಷ್ಟು ಬೇಗ ಎನ್ಎಸ್ಎಸ್ ವಿದ್ಯಾರ್ಥಿಗಳ ಪಟ್ಟಿ ಕೊಡುವಂತೆ ತಿಳಿಸಿದ್ದಾರೆ.