ಬೆಂಗಳೂರು: ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 17ರಂದು ರಾಜ್ಯ ಮಟ್ಟದ ಬಂದ್‌ಗೆ ವಿದ್ಯಾರ್ಥಿಗಳು ಕರೆ ನೀಡಿದ್ದು, ಈ ಹೋರಾಟಕ್ಕೆ ಎನ್‌ಎಸ್‌ಯುಐ ನೇತೃತ್ವ ವಹಿಸುತ್ತಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಅವರು, ನಾಡಿನ ಪ್ರಗತಿಗೆ ಮುಖ್ಯವಾದುದು ವಿದ್ಯಾರ್ಥಿಗಳು ಹಾಗೂ ಅವರಿಗೆ ಶಿಕ್ಷಣ ನೀಡುವುದಾಗಿದೆ. ಇಂದು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡದಂತೆ ಸರ್ಕಾರ ನೀತಿ ರೂಪಿಸುತ್ತಿವೆ. ಹಿಂದೆಲ್ಲ ಸರ್ಕಾರಗಳು ವಿದ್ಯಾರ್ಥಿಗಳು ಓದಬೇಕು ಎಂದು ವಿದ್ಯಾರ್ಥಿ ವೇತನ, ಬ್ಯಾಂಕ್ ಸಾಲ, ಸಾರಿಗೆ ವ್ಯವಸ್ಥೆ, ಬಸ್ ಪಾಸ್ ನೀಡುತ್ತಿದ್ದವು. ಆದರೆ ಇಂದು ವಿದ್ಯಾಭ್ಯಾಸ ಆಗದಂತೆ ಮಾಡುತ್ತಿದ್ದಾರೆ.