ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲರ್ಗಳ ಸಂಖ್ಯೆಯನ್ನು 243 ಎಂದು ನಿಗದಿಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಕೆ.ಎ.ಹಿದಾಯತ್ಉಲ್ಲಾ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ 7 ನೇ ಪ್ರಕರಣದ ಅಧಿಕಾರ ಚಲಾಯಿಸಿ, ಕರ್ನಾಟಕ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ. ಅಲ್ಲದೆ ಬಿಬಿಎಂಪಿ ಪ್ರದೇಶಕ್ಕೆ ಸಂಬಂಧಿಸಿದಂತೆ ವಾರ್ಡ್ಗಳನ್ನು ಪುನರ್ ವಿಂಗಡಣೆಗಳಿಗಾಗಿ 6 ತಿಂಗಳ ಅವಧಿಗೆ ಸೀಮಿತವಾಗಿ ಪುನರ್ ವಿಂಗಡಣಾ ಸಮಿತಿಯನ್ನು ರಚಿಸಲಾಗಿದೆ.