ಕರ್ನಾಟಕ

karnataka

ETV Bharat / state

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243ರಿಂದ 225ಕ್ಕೆ ಇಳಿಕೆ: ರಾಜ್ಯ ಸರ್ಕಾರ ಅಧಿಸೂಚನೆ - ಬಿಜೆಪಿ ಸರ್ಕಾರ

ಬಿಜೆಪಿ ಸರ್ಕಾರವಿದ್ದಾಗ ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243 ಇತ್ತು. ಸದ್ಯ ವಾರ್ಡ್​ಗಳನ್ನು 225ಕ್ಕೆ ಇಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

State Government Notification
ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243ರಿಂದ 225ಕ್ಕೆ ಇಳಿಕೆ: ರಾಜ್ಯ ಸರ್ಕಾರ ಅಧಿಸೂಚನೆ

By

Published : Aug 4, 2023, 10:57 PM IST

ಬೆಂಗಳೂರು:ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬಿಜೆಪಿ ಸರ್ಕಾರ ಇದ್ದಾಗ ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 243ಗೆ ಏರಿಸಿ ಆದೇಶ ಹೊರಡಿಸಿತ್ತು. ಪ್ರಸ್ತುತ ಕಾಂಗ್ರೆಸ್ ಸರ್ಕಾರ ವಾರ್ಡ್​ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿ ಅಧಿಸೂಚನೆ ಹೊರಡಿಸಿದೆ.

ಆದೇಶದಲ್ಲಿ ಜ.29, 2021ರಂದು ಬಿಜೆಪಿ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲರ್​ಗಳ ಸಂಖ್ಯೆಯನ್ನು 243 ಎಂದು ಈ ಹಿಂದೆ ನಿಗದಿಪಡಿಸಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮದಡಿ ಅಧಿಕಾರ ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲರ್​ಗಳ ಸಂಖ್ಯೆಯನ್ನು 225 ಎಂದು ನಿಗದಿಪಡಿಸಲಾಗಿದೆ.

ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್​ಗಳಿವೆ. ಬಿಜೆಪಿ ಸರ್ಕಾರ 2011ರ ಜನಗಣತಿಯ ಆಧಾರದ ಮೇರೆಗೆ ವಾರ್ಡ್‌ ಮರು ವಿಂಗಡಣೆ ಮಾಡಿತ್ತು. ಈವರೆಗೆ ಇದ್ದ 198 ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿತ್ತು. ಅವೈಜ್ಞಾನಿಕವಾಗಿ ವಾರ್ಡ್ ಮರುವಿಂಗಡನೆ ಮಾಡಲಾಗಿದೆ ಎಂದು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ವಾರ್ಡ್ ಪುನರ್​ ವಿಂಗಡಣೆಗೆ ಕಾಲಾವಕಾಶ ನೀಡಿದ್ದ ಹೈಕೋರ್ಟ್​:ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ವಾರ್ಡ್ ಪುನರ್​ ವಿಂಗಡಣೆಯನ್ನು ಕಾಂಗ್ರೆಸ್​ನ ಮಾಜಿ ಮೇಯರ್, ಮುಖಂಡರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ಹೊಸದಾಗಿ ವಾರ್ಡ್ ಪುನರ್​ ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು.

ಅದರಂತೆ ಜೂನ್‌ನಲ್ಲಿ ಕಾಂಗ್ರೆಸ್ ಸರ್ಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚನೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು (ಕಂದಾಯ) ಒಳಗೊಂಡ ಆಯೋಗ ರಚಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ವಾರ್ಡ್ ಪುನರ್​​ ವಿಂಗಡಣೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಸರ್ಕಾರ ರೂಪಿಸುತ್ತಿರುವ ತಂತ್ರಗಾರಿಕೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವಾರ್ಡ್​​ಗಳನ್ನು 198 ರಿಂದ 243ಕ್ಕೆ ಹೆಚ್ಚಿಸಲಾಗಿತ್ತು. ಇದೀಗ 225ಕ್ಕೆ ಇಳಿಸಿ ನೂತನ ಸರ್ಕಾರ ಆದೇಶ ನೀಡಿದೆ.

ಇದನ್ನೂ ಓದಿ:ಹು-ಧಾ ಪಾಲಿಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಡಿಸಿಗೆ ದೂರು ನೀಡಲು ಮುಂದಾದ ಕಾಂಗ್ರೆಸ್

ABOUT THE AUTHOR

...view details