ಕರ್ನಾಟಕ

karnataka

ETV Bharat / state

ಬೆಂಗಳೂರಿನಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ - Etv bharat kannada

ಬೆಂಗಳೂರಿನಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚು ಜನರು ಪ್ರತಿದಿನ ಸೋಂಕಿಗೆ ಒಳಗಾಗುತ್ತಿದ್ದಾರೆ.

ಕೋವಿಡ್
ಕೋವಿಡ್

By

Published : Aug 1, 2022, 6:22 PM IST

ಬೆಂಗಳೂರು: ರಾಜಧಾನಿಯಲ್ಲಿ ಹಲವು ದಿನಗಳ‌ ಬಳಿಕ‌‌ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕೂ ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಒಟ್ಟು 1,154 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಕೋವಿಡ್​ ಪ್ರಕರಣಗಳ ವಿವರ

ಈ ಮೂಲಕ ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,36,068 ಕ್ಕೆ ಏರಿಕೆಯಾಗಿದೆ. ಈವರೆಗೆ 16,974 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಒಟ್ಟು 8,595 ಸಕ್ರಿಯ ಪ್ರಕರಣಗಳಿವೆ. ನಿನ್ನೆ 861 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ.

ನಿನ್ನೆ 1,094 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 11,105 ಕೋವಿಡ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:2023ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ.. ಜಿ. ಪರಮೇಶ್ವರ್ ಅಧ್ಯಕ್ಷ

ABOUT THE AUTHOR

...view details