ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ ನರ್ಸಿಂಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 161 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಬಿಎಸ್ಸಿ ಮತ್ತು ಮಿಡ್ವೈಫ್ ನರ್ಸ್ಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ನಿಮ್ಹಾನ್ಸ್ನಲ್ಲಿ ಖಾಲಿ ಇರುವ ಒಟ್ಟು 161 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ನರ್ಸಿಂಗ್ ಮಂಡಳಿಗಳಿಂದ ಬಿಎಸ್ಸಿ ನರ್ಸಿಂಗ್ ಪದವಿ ಹೊಂದಿರಬೇಕು. ರಾಜ್ಯ ಅಥವಾ ಭಾರತ ನರ್ಸಿಂಗ್ ಮಂಡಳಿಯಿಂದ ನರ್ಸ್ ಅಥವಾ ಮಿಡ್ವೈಫ್ ನೋಂದಣಿ ಹೊಂದಿರಬೇಕು.
ಅನುಭವ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎರಡು ವರ್ಷ ನರ್ಸಿಂಗ್ ಹುದ್ದೆ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು.
ವೇತನ:ಈ ಹುದ್ದೆಗಳಿಗೆ 9,300 ದಿಂದ 34,800ರೂ ವರೆಗೆ ಮಾಸಿಕ ವೇತನ ನಿಗದಿ ಮಾಡಲಾಗಿದೆ.
ವಯೋಮಿತಿ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ತುಂಬಿರಬೇಕು. ಕೇಂದ್ರ ಸರ್ಕಾರದ ನಿಯಮದ ಅನುಸಾರ ಮೀಸಲು ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.