ಬೆಂಗಳೂರು :ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಸ್ಪರ್ಧಿಸಲು ಸ್ವೀಕೃತವಾಗಿರುವ ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ ಅಂಗೀಕೃತವಾಗಿವೆ. ಹಾಗಾಗಿ, ಮೂರು ಪಕ್ಷಗಳ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.
ಚುನಾವಣಾಧಿಕಾರಿಗಳೂ ಆದ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು, ಇಂದು ನಾಮಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಏಳು ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕೃತಗೊಂಡಿವೆ ಎಂದು ಅವರು ತಿಳಿಸಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಮೇ 27ರ ಮಧ್ಯಾಹ್ನ 3 ಗಂಟೆವರೆಗೂ ಅವಕಾಶವಿದೆ. ನಂತರ ಆಯ್ಕೆಯಾಗಿರುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.