ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದ ಹಲವು ರಸ್ತೆಗಳಿಗೆ ರಾತ್ರೋರಾತ್ರಿ ಡಾಂಬರೀಕರಣ ಮಾಡಿರುವುದು ಬೆಳಕಿಗೆ ಬಂದಿದೆ. ಬಿಬಿಎಂಪಿ ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದ್ದರೂ ಗುಂಡಿ ಮುಚ್ಚಿರಲಿಲ್ಲ, ಆದರೀಗ ಮೋದಿ ಬರುತ್ತಾರೆಂದು ಎಲ್ಲ ಗುಂಡಿ ಮುಚ್ಚಲಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೋದಿ ಓಡಾಡುವ ರಸ್ತೆಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲಾಗಿದೆ. ಏರ್ಪೋರ್ಟ್ನಿಂದ ಭಾರತೀಯ ವಿಜ್ಞಾನ ಸಂಸ್ಥೆಯ ವರೆಗೂ ರಸ್ತೆ ಪೂರ್ತಿ ದುರಸ್ತಿ ಮಾಡಲಾಗಿದೆ. ರಾಜ್ಯ ಸರ್ಕಾರದ ಮುತುವರ್ಜಿಯಿಂದ ರೋಡ್ ಗುಂಡಿ ಮುಕ್ತವಾಗಿದೆ.