ಕರ್ನಾಟಕ

karnataka

ETV Bharat / state

ವಿನೀತ ಭಾವದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಸ್ವೀಕಾರ : ಮಾಜಿ ಸಿಎಂ ಬಿಎಸ್​ವೈ - ಬಿಎಸ್​ವೈಗೆ ಪ್ರಶಸ್ತಿ ನೀಡಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಈ ಕುರಿತಂತೆ ಬಿಎಸ್​ವೈ ಟ್ವೀಟ್​ ಮಾಡಿ ಸಂಸತ ವ್ಯಕ್ತಪಡಿಸಿದ್ದಾರೆ..

Om birla gives best legislator award gave yediyurappa
ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕರ ಪ್ರಶಸ್ತಿ ಪ್ರದಾನ

By

Published : Sep 24, 2021, 4:56 PM IST

ಬೆಂಗಳೂರು :ಅತ್ಯಂತ ವಿನೀತ ಭಾವದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಸಂತಸ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಬಿಎಸ್​ವೈ ಟ್ವೀಟ್​ ಮಾಡಿದ್ದು, ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ.

ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ವಿಧಾನಸಭೆ ಜಂಟಿ ಸದನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಪರಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಬಸವರಾಜ ಎಸ್ ಬೊಮ್ಮಾಯಿ ಭಾಗಿಯಾಗಿದ್ದರು.

ಇದನ್ನೂ ಓದಿ:ಮಾಜಿ ಸಿಎಂ ಯಡಿಯೂರಪ್ಪ ಈ ಬಾರಿಯ ಅತ್ಯುತ್ತಮ ಶಾಸಕ.. ಹೊಸ ಸಂಪ್ರದಾಯಕ್ಕೆ ನಾಂದಿ..

For All Latest Updates

ABOUT THE AUTHOR

...view details