ಹೊಸ ಪ್ರತಿಭೆಗಳು ಸಿದ್ಧಪಡಿಸಿರುವ 'ಓಮಿನಿ' ಚಲನಚಿತ್ರದ ಟ್ರೈಲರ್ ಅನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಬಳಿಕ ಮಾತನಾಡಿದ ಅವರು, "ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ ಓಮಿನಿ ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರೇ. ಚಿತ್ರಕ್ಕೆ ಒಳ್ಳೆಯದಾಗಲಿ" ಎಂದು ಹಾರೈಸಿದರು.
ನಿರ್ದೇಶಕ ಮಂಜು ಮಾತನಾಡಿ, "ಓಮಿನಿ ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ ಓಮಿನಿ ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಗೃಹ ಸಚಿವರು ಕಾರ್ಯಕ್ರಮಕ್ಕೆ ಬಂದಿರುವುದು ಸಂತಸ ತಂದಿದೆ" ಎಂದರು.