ಬೆಂಗಳೂರು: ಜೆಡಿಎಸ್ ಪಕ್ಷವು ಬಿಜೆಪಿಯ 'ಬಿ ಟೀಂ' ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಟೀಕಿಸಿದ್ದಾರೆ.
ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂಬುದು ಮತ್ತೆ ಸಾಬೀತು: ಎಸ್.ಆರ್. ಪಾಟೀಲ್ - S R patil tweet
ಜೆಡಿಎಸ್ ಪಕ್ಷದಲ್ಲಿ ಈಗ ಜಾತ್ಯಾತೀಯತೆ ಮಾಯವಾಗಿದೆ. ಅಧಿಕಾರಕ್ಕೆ ಪಕ್ಷದ ಸಿದ್ದಾಂತಗಳನ್ನು ಗಾಳಿಗೆ ತೂರಿದ್ದಾರೆ. ಇದು ಪಕ್ಷ ಹಾಗೂ ಕಾರ್ಯಕರ್ತರಿಗೆ ಮಾಡಿದ ಅವಮಾನವಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ ಬಿಜೆಪಿ, ಜೆಡಿಎಸ್ ಒಂದಾಗಿದೆ. ಜೆಡಿಎಸ್, ಬಿಜೆಪಿಯ ಬಿ ಟೀಂ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿಧಾನ ಪರಿಷತ್ ಸಭಾಪತಿ ಹಾಗೂ ಉಪಸಭಾಪತಿ ಸ್ಥಾನಗಳಿಗೆ ಹೊಂದಾಣಿಕೆಯ ಅಭ್ಯರ್ಥಿಗಳನ್ನು ಹಾಕಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ಪಾಟೀಲ್ ಟ್ವೀಟ್ ಮಾಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಈಗ ಜಾತ್ಯಾತೀಯತೆ ಮಾಯವಾಗಿದೆ. ಅಧಿಕಾರಕ್ಕೆ ಪಕ್ಷದ ಸಿದ್ದಾಂತಗಳನ್ನು ಗಾಳಿಗೆ ತೂರಿದ್ದಾರೆ. ಇದು ಪಕ್ಷ ಹಾಗೂ ಕಾರ್ಯಕರ್ತರಿಗೆ ಮಾಡಿದ ಅವಮಾನವಾಗಿದೆ. ಅಧಿಕಾರದ ಅಮಲಿನಲ್ಲಿ ಈಶ್ವರಪ್ಪರವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.