ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಐಪಿಎಲ್ ಬೆಟ್ಟಿಂಗ್ ದಂಧೆ: ಓರ್ವನ ಬಂಧನ
ಬೆಟ್ಟಿಂಗ್ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿ, ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಜಮೀರ್ ಅಹ್ಮದ್ ಬಂಧಿತ ಆರೋಪಿ. ಈತ ಬೆಂಗಳೂರು ನಗರದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ರಾಯಲ್ ಆರ್ಚಿಡ್ ಅಪಾರ್ಟ್ಮೆಂಟ್ ಮುಂದೆ ಇರುವ ಫ್ಯಾಷನ್ ಬಟ್ಟೆ ಅಂಗಡಿ ಮುಂಭಾಗದ ಸಾರ್ವಜನಿಕರ ರಸ್ತೆ ಬಳಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಮೊಬೈಲ್ ಮೂಲಕ ಹಣ ಕಟ್ಟಿಕೊಂಡು ಬೆಟ್ಟಿಂಗ್ ಆಡುತ್ತಿದ್ದ ಎಂದು ತಿಳಿದುಬಂದಿದೆ. ಬಂಧಿತನಿಂದ 4 ಲಕ್ಷ ರೂ. ನಗದು ಹಾಗೂ ಒಂದು ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ವರ್ತೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.