ಆನೇಕಲ್: ನಾಲ್ಕು ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ದೃಢಪಟ್ಟಿದೆ.
ಆನೇಕಲ್ನಲ್ಲಿ ಮತ್ತೊಂದು ಕೊರೊನಾ ಕೇಸ್ ದೃಢ - ಆನೇಕಲ್ ಬೆಂಗಳೂರು ಲೆಟೆಸ್ಟ್ ನ್ಯೂಸ್
ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ಎಂದು ವರದಿ ಬಂದಿದೆ.
ಸೂರ್ಯ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಎಂದು ಬಂದಿದೆ. ಇದಕ್ಕೂ ಮುನ್ನ ಅವರು ಜಿಗಣಿ ಭಾಗದ ವೈಕೆಆರ್ ಆಸ್ಪತ್ರೆಯಲ್ಲಿ ಜ್ವರ ಮತ್ತು ಸುಸ್ತು ಚಿಕಿತ್ಸೆಗೆ ದಾಖಲಾಗಿದ್ದರು. ಜಿಗಣಿಯ ವಿಜಯಶ್ರೀ ಆಸ್ಪತ್ರೆಗೆ ಎಕ್ಸರೇ ಮಾಡಿಸಲು ತೆರಳಿದ್ದರು. ನಂತರ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಮಾಡಿದಾಗ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಜಿಗಣಿ ವೈದ್ಯಾಧಿಕಾರಿಗಳ ತಂಡ ಕೊರೊನಾ ಸೋಂಕಿತ ಮಹಿಳೆಯ ಸಂಚಾರ ಮತ್ತು ಪ್ರಾಥಮಿಕ ಸಂಪರ್ಕ ಪರಿಶೀಲಿಸುತ್ತಿದ್ದು, ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತ ಮಹಿಳೆಯನ್ನು ದಾಖಲಿಸಲಾಗಿದೆ. ಎರಡೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ 18 ಮಂದಿ ಹಾಗು ದ್ವಿತೀಯ ಸಂಪರ್ಕದಲ್ಲಿದ್ದ 11 ಮಂದಿಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದು, ಹೆನ್ನಾಗರ ಗ್ರಾಮದ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡಲಾಗುತ್ತಿದೆ.