ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಬೆಂಗಳೂರು :ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ್ದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇಂದು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಅವರಿಗೆ ಅಸ್ತಮಾ, ಟಿಬಿ, ಹೃದಯ ಸಂಬಂಧಿ ಕಾಯಿಲೆ ಇತ್ತು. ಕೋವಿಡ್ ಪಾಸಿಟಿವ್ ಬಂದಿತ್ತು. ಡಿಸೆಂಬರ್ 15 ರಂದು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಸಾವು ಜೆಎನ್.1 ನಿಂದ ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದರು.
ಕೊರೊನಾ ವೈರಾಣು ಜೆಎನ್. 1 ಉಪ ತಳಿಯ 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ರಾಜ್ಯದಲ್ಲಿ ಡಿಸೆಂಬರ್ 15 ರಂದು ಕೊರೊನಾ ವೈರಸ್ ಸೋಂಕಿಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ಜೆಎನ್.1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೋವಿಡ್ಗೆ ಸಂಬಂಧಿಸಿದಂತೆ ನಾಳೆ ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದರು. ದೇಶಗಳಿಂದ ಬರುವವರಿಗೆ ಸದ್ಯಕ್ಕೆ ಸ್ಕ್ರೀನಿಂಗ್ ಇಲ್ಲ. ಕೇರಳದಿಂದ ಬರುವ ಅಯ್ಯಪ್ಪ ಭಕ್ತರಿಗೂ ಸ್ಕ್ರೀನಿಂಗ್ ಮಾಡಲು ಹೇಳಿಲ್ಲ. ಆದರೆ, ಕೋವಿಡ್ ಲಕ್ಷಣವಿದ್ದರೆ ಮಾತ್ರ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಕೇರಳ ಗಡಿಯ 4 ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕಳೆದ ಬಾರಿ ಶೇ 90 ರಷ್ಟು ಜನರು ಹೋಂ ಕ್ವಾರಂಟೈನ್ನಲ್ಲಿ ಇದ್ದರು. ಟೆಸ್ಟಿಂಗ್ ಕಿಟ್, ಮಾಸ್ಕ್, ಔಷಧ ವಿತರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಸಂಬಂಧ ನಾಳೆ ಚರ್ಚೆ ಆಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಆರ್ಟಿ-ಪಿಸಿಆರ್ ಟೆಸ್ಟ್ ದರದ ಬಗ್ಗೆ ಚರ್ಚೆ ಮಾಡುತ್ತೇವೆ. ಸದ್ಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆರ್ಟಿ-ಇಸಿಆರ್ ಟೆಸ್ಟ್ ಉಚಿತ ಇದೆ. ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ ಎಂದು ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ಮುಂದುವರೆದು ಇವತ್ತಿನ ಸಭೆಯಲ್ಲಿ ಕೇಂದ್ರದ ಆರೋಗ್ಯ ಸಚಿವರು ಕೇಂದ್ರದ ಉನ್ನತಾಧಿಕಾರಿಗಳು ಹಾಗೂ ಎಲ್ಲಾ ರಾಜ್ಯದ ಆರೋಗ್ಯ ಸಚಿವರು ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ಅಂತರಾಷ್ಟ್ರೀಯ ರಾಷ್ಟ್ರದ ಪರಿಸ್ಥಿತಿ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು. ಇದರ ಜೊತೆಗೆ ಸಭೆಯಲ್ಲಿ ನಮ್ಮ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ಕೇಳಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದೆ. ಕೋವಿಡ್ ಉಪ ತಳಿ ಜೆಎನ್.1 ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಹರಡಿದೆ. ಮೂರು ತಿಂಗಳಿಂದ ಹೆಚ್ಚಾಗಿ ಕಾಣಿಸಿಕೊಂಡಿದೆ. ಆಗಸ್ಟ್ನಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಬಹಳ ವೇಗವಾಗಿ ಹರಡುವ ವೈರಾಣಾಗಿದ್ದರೂ, ಇದು ಹಾನಿಕಾರಕವಾಗಿಲ್ಲ. ಮೃತಪಡುವುದು ವಿರಳ. ಯಾವುದೇ ರೀತಿಯ ಭಯ, ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸುವುದು ಅಗತ್ಯ ಎಂದರು. ಕರ್ನಾಟಕದಲ್ಲಿ ಅತಿ ಹೆಚ್ಚು ಟೆಸ್ಟ್ ಮಾಡಲಾಗಿದೆ. ಕಳೆದ ಇಪ್ಪತ್ತನಾಲ್ಕು ಗಂಟೆಯಲ್ಲಿ ಒಂದು ಸಾವಿರ ಟೆಸ್ಟ್ 1,020 ಟೆಸ್ಟ್ ಆಗಿದೆ. ಪ್ರತಿದಿನ ಟೆಸ್ಟ್ ಹೆಚ್ಚು ಮಾಡಲು ಸೂಚಿಸಲಾಗಿದೆ. ಪ್ರತಿದಿನ 5 ಸಾವಿರ ಟೆಸ್ಟ್ ಮಾಡುವ ಉದ್ದೇಶವಿದೆ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ ಕೋವಿಡ್ ಹೈ ಅಲರ್ಟ್: ಕಿಮ್ಸ್ ಕೈ ಸೇರದ ಸರ್ಕಾರದ ಮಾರ್ಗಸೂಚಿ; ಆದರೂ ಸಕಲ ಸಿದ್ಧತೆ: ಡಾ. ಎಸ್ ಎಸ್ ಕಮ್ಮಾರ
ಇದನ್ನೂ ಓದಿ:ಮಂಡ್ಯದಲ್ಲಿ ಓರ್ವ ವೃದ್ಧನಿಗೆ ಕೋವಿಡ್ ಪಾಸಿಟಿವ್; ಆರೋಗ್ಯ ಇಲಾಖೆ ಅಲರ್ಟ್