ಕರ್ನಾಟಕ

karnataka

ETV Bharat / state

ನೀಟ್ ಪರೀಕ್ಷೆ ಬರೆದ 1.34 ಲಕ್ಷ ವಿದ್ಯಾರ್ಥಿಗಳು - ಈಟಿವಿ ಭಾರತ್ ಕನ್ನಡ ಸುದ್ದಿ

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಇಂದು (ನೀಟ್​) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆದಿದೆ.

ನೀಟ್​
ನೀಟ್​

By

Published : May 7, 2023, 10:38 PM IST

ಬೆಂಗಳೂರು:ದೇಶಾದ್ಯಂತ ಇಂದು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆದಿದ್ದು, ರಾಜ್ಯದಲ್ಲಿ 1.34 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ‌.

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ನೀಟ್ ಪರೀಕ್ಷೆ ನಡೆಯಿತು. ರಾಜ್ಯದ 1,34,379 ವಿದ್ಯಾರ್ಥಿಗಳು ಸೇರಿ ದೇಶಾದ್ಯಂತ 20,87,445 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ 14,753 ಮಂದಿ ಹೆಚ್ಚಿನ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ತಮಿಳು, ತೆಲುಗು, ಉರ್ದು, ಪಂಜಾಬಿ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು.

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆದಿದ್ದು, ನೀಟ್ ಪರೀಕ್ಷೆ ಅಂಗವಾಗಿ ಮಧ್ಯಾಹ್ನ ಇದ್ದ ರೋಡ್ ಶೋ ಅನ್ನು ಶನಿವಾರವೇ ನಡೆಸಿ ಶನಿವಾರ ಬೆಳಗ್ಗೆ ನಡೆಯಬೇಕಿದ್ದ ರೋಡ್ ಶೋ ಅನ್ನು ಭಾನುವಾರ ಬೆಳಗ್ಗೆ ನಡೆಸಲಾಯಿತು. ನೀಟ್ ಪರೀಕ್ಷಾರ್ಥಿಗಳ ಸಂಚಾರಕ್ಕೆ ಪೊಲೀಸರು ಅಡ್ಡಿಪಡಿಸದೆ ರೋಡ್ ಶೋ ವ್ಯಾಪ್ತಿಯಲ್ಲಿಯೂ ಹಾಲ್ ಟಿಕೆಟ್ ಪರಿಶೀಲನೆ ನಡೆಸಿ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. 11.30 ಕ್ಕೆ ರೋಡ್ ಶೋ ಅಂತಿಮ ಹಂತ ತಲುಪಿದ್ದ ಹಿನ್ನೆಲೆ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗಲಿಲ್ಲ‌. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.20 ರವರೆಗೆ ಪರೀಕ್ಷೆ ನಡೆಯಿತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗು ಸಸ್ಯಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು.

ವೇಳಾಪಟ್ಟಿ ಬದಲಿಸಿಕೊಳ್ಳಲು ಹೆಚ್​ಡಿಕೆ ಆಗ್ರಹ: ಬೆಂಗಳೂರಿನಲ್ಲಿ ಇದೇ 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಮ್ಮಿಕೊಂಡಿದ್ದ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿ ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು (ಏಪ್ರಿಲ್ 5-2023)ರಂದು ಒತ್ತಾಯಿಸಿದ್ದರು.

ಜೆಪಿ ನಗರದ ತಮ್ಮ ನಿವಾಸದಲ್ಲಿ ಅಂದು ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದಿದ್ದರು.

ಜನರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ:ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯುವುದೇ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದರು.

ಇದನ್ನೂ ಓದಿ:ನೀಟ್ ಪರೀಕ್ಷೆ ದಿನವೇ ಪ್ರಧಾನಿ ರೋಡ್ ಶೋ: ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವೇಳಾಪಟ್ಟಿ ಬದಲಿಸಿಕೊಳ್ಳಲು ಹೆಚ್​ಡಿಕೆ ಆಗ್ರಹ

ABOUT THE AUTHOR

...view details