ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಚಾಮುಂಡೇಶ್ವರಿ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಮತ್ತು ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಫೆಬ್ರವರಿ 1 ರಂದು ಅಧಿಸೂಚನೆ ಪ್ರಕಟಿಸಲಾಗಿದ್ದು, ಫೆಬ್ರವರಿ 7ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಆರಂಭ ಹಾಗೂ ಅರ್ಜಿ ಸಲ್ಲಿಕೆಗೆ ಮಾರ್ಚ್ 7 ಕೊನೆ ದಿನವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖೇನ ಆಯ್ಕೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ನಿಗಮ ಹೇಳಿದೆ.
ಸಹಾಯಕ ಇಂಜಿನಿಯರ್ (ವಿದ್ಯುತ್)- 393, ಕಲ್ಯಾಣ ಕರ್ನಾಟಕ- 106, ಸಹಾಯಕ ಇಂಜಿನಿಯರ್ (ಸಿವಿಲ್) 21, ಕಲ್ಯಾಣ ಕರ್ನಾಟಕ- 7, ಕಿರಿಯ ಇಂಜಿನಿಯರ್ (ವಿದ್ಯುತ್)- 477, ಕಲ್ಯಾಣ ಕರ್ನಾಟಕ- 82, ಕಿರಿಯ ಇಂಜಿನಿಯರ್ (ಸಿವಿಲ್) - 21, ಕಲ್ಯಾಣ ಕರ್ನಾಟಕ- 8, ಕಿರಿಯ ಸಹಾಯಕ- 357 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.