ಬೆಂಗಳೂರು:ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಸೇರಿದಂತೆ 1ರಿಂದ 5ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣ ರದ್ದುಗೊಳಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದು, ಸುದ್ದಿಗೋಷ್ಠಿ ವೇಳೆ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರು, ಖಾಸಗಿ ಶಾಲೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿದರು. ಚಿಕ್ಕ ಮಕ್ಕಳಿಗೆ ಹೆಚ್ಚು ತೊಂದರೆ ಆಗುವ ಕಾರಣ ಈ ನಿರ್ಧಾರ ಕೈಗೊಂಡಿದ್ದಾಗಿ ಅವರು ತಿಳಿಸಿದ್ದಾರೆ. ಆನ್‍ಲೈನ್ ಶಿಕ್ಷಣದ ಒತ್ತಡದಿಂದ ಮಕ್ಕಳ ಮೆದುಳಿನ ಮೇಲೂ ಅಡ್ಡ ಪರಿಣಾಮವಾಗಲಿದೆ ಎಂದಿದ್ದಾರೆ.