ಬೆಂಗಳೂರು: ಆನ್ಲೈನ್ ಶಿಕ್ಷಣ ಮಾರ್ಗಸೂಚಿ ಮೇರೆಗೆ ರಾಜ್ಯದ ಎಲ್ಲಾ ಶಾಲೆಗಳು ಆನ್ಲೈನ್ ಶಿಕ್ಷಣವನ್ನು ನಡೆಸುವಂತೆ ವಿವರವಾದ ಸುತ್ತೋಲೆಯನ್ನು ಇಂದೇ ಹೊರಡಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಲಾಖೆಯವರಿಗೆ ಸೂಚಿಸಿದ್ದಾರೆ.
ಮಕ್ಕಳ ಕಣ್ಣಿನ ಮೇಲೆ ಆನ್ಲೈನ್ ಶಿಕ್ಷಣದ ಎಫೆಕ್ಟ್: ಮುಂದಿನ ಯೋಜನೆಯೇನು? - New Guidelines for online class
ಕೋವಿಡ್ ಹಿನ್ನೆಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗದಂತೆ ಆನ್ಲೈನ್ ಶಿಕ್ಷಣ ಕೈಗೊಳ್ಳಲಾಯ್ತು. ಇದೀಗ ಆನ್ಲೈನ್ ಶಿಕ್ಷಣ ಮಕ್ಕಳ ಕಣ್ಣಿಗೆ ಕೆಡುಕು ಉಂಟು ಮಾಡುತ್ತಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆನ್ಲೈನ್ ಶಿಕ್ಷಣ ಮಾರ್ಗಸೂಚಿಯನ್ನು ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದ ಮೇರೆಗೆ ಸಿದ್ಧಪಡಿಸಲಾಗಿದೆ.
ಕೋವಿಡ್ ಹಿನ್ನೆಲೆ ಸದ್ಯ ಶಾಲಾ-ಕಾಲೇಜು ಪುನರಾರಂಭಕ್ಕೆ ಬ್ರೇಕ್ ಹಾಕಲಾಗಿದೆ. ಆದರೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗೋದು ಬೇಡ ಎಂದು ಆನ್ಲೈನ್ ಶಿಕ್ಷಣ ಕೈಗೊಳ್ಳಲಾಯ್ತು. ಇದೀಗ ಆನ್ಲೈನ್ ಶಿಕ್ಷಣ ಮಕ್ಕಳ ಕಣ್ಣಿಗೆ ಕೆಡುಕು ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಆನ್ಲೈನ್ ಶಿಕ್ಷಣ ಮಾರ್ಗಸೂಚಿಯನ್ನು ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದ ಮೇರೆಗೆ ಸಿದ್ಧಪಡಿಸಲಾಗಿದೆ.
ಸದ್ಯ ಮಾರ್ಗಸೂಚಿ ಹಾಗೂ ವರದಿಯ ಆಧಾರದ ಮೇರೆಗೆ ಶಾಲೆಗಳು ಆನ್ಲೈನ್ ಶಿಕ್ಷಣ ನಡೆಸುವಂತೆ ವಿವರವಾದ ಸುತ್ತೋಲೆಯನ್ನು ಹೊರಡಿಸಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಲಾಖೆಯವರಿಗೆ ಸೂಚಿಸಿದ್ದಾರೆ.