ಬೆಂಗಳೂರು:ಚಿತ್ರಮಂದಿರಗಳಿಗೆ ಶೇ. 50ರಷ್ಟು ಮಾತ್ರ ಪ್ರೇಕ್ಷರಿಗೆ ಅವಕಾಶ ನೀಡಿರುವ ಬಗ್ಗೆ ಸಿಎಂ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಮತ್ತೆ ನಿರ್ಧಾರ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ನಂತರ ರಾಜ್ಯಗಳು ಕ್ರಮ ಕೈಗೊಳ್ಳಲು ಸೂಚಿಸಿದೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಪ್ರಕಾರ ನಾವು SOP ಬಿಡುಗಡೆ ಮಾಡಿದ್ದೇವೆ. ಫೆ. 28ವರೆಗೂ ಶೇ. 50ರಷ್ಟು ತುಂಬಬಹುದು. ನೆರೆಯ ಕೇರಳದಲ್ಲಿ ಪ್ರತೀ ದಿನ 5 ಸಾವಿರ ಕೇಸ್ ದಾಖಲಾಗುತ್ತಿವೆ. ಮನರಂಜನೆಗಿಂತ ಜನರ ಆರೋಗ್ಯ ಮುಖ್ಯ ಎಂದು ಸಮರ್ಥಿಸಿಕೊಂಡರು.