ಕರ್ನಾಟಕ

karnataka

ETV Bharat / state

ಹಸಿರು ಪಟಾಕಿಗಷ್ಟೇ ಅವಕಾಶ: ಆದೇಶ ಮೀರಿದ್ರೆ ಮುಲಾಜಿಲ್ಲದೆ ಜಪ್ತಿ - ಹಸಿರು ಪಟಾಕಿಗಷ್ಟೇ ಅವಕಾಶ

ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಇಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿಗಳಿಗೆ, ಪೊಲೀಸ್, ಅಗ್ನಿಶಾಮಾಕ ಇಲಾಖೆಗೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಿದೆ.

only allowed green crackers Pollution Control Board order
ಹಸಿರು ಪಟಾಕಿಗಷ್ಟೆ ಅವಕಾಶ: ಮಾಲಿನ್ಯ ನಿಯಂತ್ರಣ ಮಂಡಳಿ

By

Published : Oct 17, 2022, 7:39 PM IST

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮಕ್ಕೆ ಮುಂದಾಗಿದೆ.

ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಇಡುವುದಕ್ಕೆ ಅವಕಾಶ ಕಲ್ಪಿಸಲಾಗಿದ್ದು. ಒಂದು ವೇಳೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಜಪ್ತಿ ಮಾಡುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿಗಳಿಗೆ, ಪೊಲೀಸ್, ಅಗ್ನಿ ಶಾಮಾಕ ಇಲಾಖೆಗೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಿದೆ.

ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಸಿಡಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೆಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ :ದೀಪಾವಳಿ ಹಬ್ಬದ ಪ್ರಯುಕ್ತ 1500ಕ್ಕೂ ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಿದೆ ಕೆಎಸ್​ಆರ್​ಟಿಸಿ

ABOUT THE AUTHOR

...view details