ಬೆಂಗಳೂರು :ಕಳೆದ ಏಳೆಂಟು ತಿಂಗಳಿನಿಂದ ದಿನೇ ದಿನೆ ಏರಿಕೆಯಾಗುತ್ತಲೇ ಇದ್ದ ರಾಜ್ಯದ ಕೊರೊನಾ ಸೋಂಕಿತರ ಸಂಖ್ಯೆ, ಇದೀಗ ಕಡೆಮೆಯಾಗುತ್ತಾ ಬರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಬರುವ ಎಲ್ಲಾ ಶುಭ ಸೂಚನೆಗಳು ಗೋಚರಿಸುತ್ತಿವೆ.
ಈಗಾಗಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದಿದ್ದ ದೇಶದ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲೂ ಅಕ್ಟೋಬರ್ 15 ರಿಂದ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಾಣಲಿದೆ. ಹೆಚ್ಚು ಹೆಚ್ಚು ಪರೀಕ್ಷೆ ನಡೆಸಿದರೆ ಸೋಂಕು ನಿಯಂತ್ರಿಸಲು ಸಾಧ್ಯ ಎಂದು ತಜ್ಞರು ತಿಳಿಸಿದ್ದರು. ಅದರಂತೆಯೇ, ಅಕ್ಟೋಬರ್ 15 ರಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖ ಕಾಣುತ್ತಿದೆ.
ರಾಜ್ಯದಲ್ಲಿ ಪ್ರತಿದಿನ 1 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕಿತರ ಸಂಖ್ಯೆಯಲ್ಲೂ ಇಳಿಮುಖ ಕಾಣುತ್ತಿದೆ. ಆದರೆ, ನವೆಂಬರ್ ಅಥವಾ ಡಿಸೆಂಬರ್ ತಿಂಗಳ ಆರಂಭದಲ್ಲಿ ಕೊರೊನಾದ ಎರಡನೇ ಅಲೆ ಪ್ರಾರಂಭವಾಗಲಿದೆಯಾ ಎಂಬ ಆತಂಕವೂ ಪ್ರಾರಂಭವಾಗಿದೆ. ಈಗಾಗಲೇ ಕೇರಳ, ದೆಹಲಿಯಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಶುರುವಾಗಿದೆ.