ಕರ್ನಾಟಕ

karnataka

ETV Bharat / state

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ: ಮೋದಿ‌ ಕರೆ ತರಲು ಬಿಜೆಪಿ ಪ್ಲಾನ್ - ಉಪ ಚುನಾವಣಾ ಪ್ರಚಾರ

ಕಾಮಗಾರಿ ಪೂರ್ಣಗೊಂಡಿರುವ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಉಪ ಚುನಾವಣಾ ಪ್ರಚಾರಕ್ಕೂ ಚಾಲನೆ ಕೊಡಲು ಬಿಜೆಪಿ ಚಿಂತನೆ ನಡೆಸಿದೆ.

ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ; ಮೋದಿ‌ ಕರೆ ತರಲು ಬಿಜೆಪಿ ಪ್ಲಾನ್

By

Published : Nov 4, 2019, 4:31 PM IST

ಬೆಂಗಳೂರು:ಕಾಮಗಾರಿ ಪೂರ್ಣಗೊಂಡಿರುವ ಕಲಬುರಗಿ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಉಪ ಚುನಾವಣಾ ಪ್ರಚಾರಕ್ಕೂ ಚಾಲನೆ ಕೊಡಲು ಬಿಜೆಪಿ ಚಿಂತನೆ ನಡೆಸಿದೆ.

ನವೆಂಬರ್ 18 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಪ್ರಧಾನಮಂತ್ರಿ ಕಚೇರಿಯಿಂದ ಪ್ರವಾಸದ ಅಧಿಕೃತ ಮಾಹಿತಿ ಬಿಡುಗಡೆಯಾಗಲಿದೆ ಎಂದು ರಾಜ್ಯ ಬಿಜೆಪಿ ನಿರೀಕ್ಷೆ ಇಟ್ಟುಕೊಂಡಿದೆ.

ಕಲಬುರ್ಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಪ್ರಧಾನಿ ಕಾರ್ಯಾಲಯದಿಂದ ದಿನಾಂಕ ನಿಗದಿಪಡಿಸುವ ಕೆಲಸ ನಡೆಯುತ್ತಿದೆ. ಕಾಮಗಾರಿ ಮುಗಿದು 2 ವರ್ಷವಾಗಿರುವ ಕಲಬುರ್ಗಿ ವಿಮಾನ ನಿಲ್ದಾಣ ತಕ್ಕ ಉದ್ಘಾಟನಾ ಭಾಗ್ಯ ಸಿಗುತ್ತಿದ್ದು,ಕಲ್ಬುರ್ಗಿಯಿಂದ ಬೆಂಗಳೂರಿಗೆ ನೇರ ವಿಮಾನಯಾನ ಸೇವೆಗೆ ಮೋದಿ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಪ್ರವಾಸದ ಅಧಿಕೃತ ವೇಳಾಪಟ್ಟಿ ಪ್ರಕಟವಾದ ನಂತರ ಕಾರ್ಯಕ್ರಮದ ರೂಪರೇಷೆ ಸಿದ್ದಪಡಿಸಲಾಗುತ್ತದೆ ಎಂದು ಸಿಎಂ ಕಚೇರಿ ಮೂಲಗಳಿಂದ ತಿಳಿದುಬಂದಿದೆ.

ಉಪಚುನಾವಣಾ ಪ್ರಚಾರಕ್ಕೆ ಚಾ(ಲನೆ) ನೀಡಲಿದ್ದಾರಾ ಪ್ರಧಾನಿ ನರೇಂದ್ರ ಮೋದಿ?

ಇದೇ ವೇಳೆ ನವೆಂಬರ್ 18 ರಂದು ಉಪ ಚುನಾವಣಾ ಪ್ರಚಾರಕ್ಕೆ ಪ್ರಧಾನಿಯಿಂದಲೇ ಚಾಲನೆ ಕೊಡಿಸಲು ಬಿಜೆಪಿ ಪ್ಲಾನ್ ಮಾಡುತ್ತಿದೆ.ಹೊಸಪೇಟೆಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ 18 ರಂದು ಪ್ರಚಾರಕ್ಕೆ ಮೋದಿ ಚಾಲನೆ ನೀಡಲಿದ್ದಾರೆ.

ನವೆಂಬರ್ 18 ರಿಂದ ಲೋಕಸಭೆಯ ಚಳಿಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ಪ್ರಧಾನಿಗಳ ರಾಜ್ಯ ಪ್ರವಾಸವನ್ನು ಪ್ರಧಾನಿ ಕಚೇರಿ ನಿಗದಿ ಮಾಡಲಿದೆ.

ABOUT THE AUTHOR

...view details