ಕರ್ನಾಟಕ

karnataka

ETV Bharat / state

ಡಿಸೆಂಬರ್​​ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ: ತಾಂತ್ರಿಕ ಸಲಹಾ ಸಮಿತಿ ಶಿಫಾರಸು... - ಶಾಲೆಗಳನ್ನು ಪುನರಾರಂಭ ಕುರಿತು ಚರ್ಚೆ

Advisory Committee
ಶಾಲೆ ತೆರೆಯುವುದು ಸೂಕ್ತವಲ್ಲ

By

Published : Nov 23, 2020, 11:54 AM IST

Updated : Nov 23, 2020, 12:29 PM IST

11:51 November 23

ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನಾರಂಭಿಸುವ ಕುರಿತು ಚರ್ಚೆ ನಡೆದಿದ್ದು, ಡಿಸೆಂಬರ್​ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಬೆಂಗಳೂರು: ನೋವೆಲ್ ಕೊರೊನಾ ವೈರಸ್ ಹಿನ್ನೆಲೆ ರಾಜ್ಯದಲ್ಲಿ ಡಿಸೆಂಬರ್​​ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. 

ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನಾರಂಭಿಸುವ ಕುರಿತು ಚರ್ಚೆಯಾಗಿದ್ದು, ಡಿಸೆಂಬರ್​ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರಿಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ಮತ್ತೆ ವೇಗ ಪಡೆದಿದೆ ಎಂಬುದು ಸಭೆಯಲ್ಲಿ ಚರ್ಚೆಯಾಗಿದೆ.

ಚಲಿಗಾಲದಲ್ಲಿ ಹೆಚ್ಚಾಗಲಿದೆ ಸೋಂಕಿನ ತೀವ್ರತೆ:

ಚಳಿಗಾಲ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್​ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್​ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. 

Last Updated : Nov 23, 2020, 12:29 PM IST

ABOUT THE AUTHOR

...view details