ಕರ್ನಾಟಕ

karnataka

ETV Bharat / state

ಅಫೀಮು ಮಾರಾಟ: ಬೆಂಗಳೂರಿನಲ್ಲಿ ಓರ್ವನ ಬಂಧನ - opium selling

ಅಫೀಮು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಸುರೇಶ್ ಕುಮಾರ್ (23) ಬಂಧಿತ ಆರೋಪಿ.

Bangalore
ಸುರೇಶ್ ಕುಮಾರ್ ಬಂಧಿತ ಆರೋಪಿ

By

Published : Apr 13, 2021, 3:47 PM IST

ಬೆಂಗಳೂರು:ಸಿಟಿ ಮಾರ್ಕೆಟ್ ಠಾಣಾ ವ್ಯಾಪ್ತಿಯ ಎಸ್.ಕೆ.ಆರ್. ಕಾಂಪ್ಲೆಕ್ಸ್ ನೆಲಮಹಡಿಯ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರಿಗೆ ಅಫೀಮು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಸುರೇಶ್ ಕುಮಾರ್ (23) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಸಿಟಿ ಮಾರ್ಕೆಟ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರಸ್ವಾಮಿ ಹಾಗೂ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಆರೋಪಿ ಬಳಿಯಿದ್ದ 180 ಗ್ರಾಂ ಅಫೀಮು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ತನಿಖೆ ಮುಂದುವರೆಸಿ ಆರೋಪಿ ನೀಡಿದ ಮಾಹಿತಿ ಮೇರೆಗೆ ಆತನ ಮನೆಯಲ್ಲಿ ದಾಸ್ತಾನು ಮಾಡಿದ್ದ 90 ಗ್ರಾಂ ತೂಕದ ಅಫೀಮು ವಶಪಡಿಸಿಕೊಂಡಿದ್ದಾರೆ. ಆರೋಪಿಯ ಬಳಿಯಿಂದ 1 ಕೆಜಿ 90 ಗ್ರಾಂ ತೂಕದ ಅಫೀಮು ವಶಪಡಿಸಿಕೊಳ್ಳುವಲ್ಲಿ ಸಿಟಿ ಮಾರ್ಕೆಟ್ ಪೊಲೀಸರು ಯಶಸ್ವಿಯಾಗಿದ್ದಾರೆ.

ABOUT THE AUTHOR

...view details