ಬೆಂಗಳೂರು:ಕಾರ್ಮಿಕ ರಾಜ್ಯ ವಿಮಾ ನಿಗಮವು ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿತ್ತು. ಇದೀಗ ರಾಜ್ಯದಲ್ಲಿ ಹಿಂದಿ ಜೊತೆಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ.
ಕಳೆದ ಡಿಸೆಂಬರ್ 27 ರಂದು ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್ ಹಾಗೂ ಮಲ್ಟಿ ಟಾಸ್ಕ್ ಸಿಬ್ಬಂದಿ ಸೇರಿದಂತೆ ಒಟ್ಟು 3865 ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಪ್ರಕಟಿಸಿತ್ತು. ಹುದ್ದೆಗಳಿಗೆ ಮೊದಲು ಬಿಡುಗಡೆ ಮಾಡಲಾದ ಅಧಿಸೂಚನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಅವಕಾಶ ಇತ್ತು. ಇದರಿಂದ ಕರ್ನಾಟಕದಾದ್ಯಂತ ಉದ್ಯೋಗಾಕಾಂಕ್ಷಿಗಳು, ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಕುರಿತು ಮಾಧ್ಯಮಗಳು ವರದಿ ಮಾಡಿ ಉದ್ಯೋಗಾಕಾಂಕ್ಷಿಗಳ ಪರ ಕನ್ನಡದಲ್ಲಿ ಪರೀಕ್ಷೆಗೆ ಮನವಿ ಮಾಡಿದ್ದವು. ರಾಜ್ಯದ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು.
ಇದಕ್ಕೆ ಸ್ಪಂದಿಸಿದ ಕೇಂದ್ರ, ಕನ್ನಡದಲ್ಲಿಯೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಕಾರ್ಮಿಕರ ರಾಜ್ಯ ವಿಮಾ ನಿಗಮವು ತಿದ್ದುಪಡಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾನು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ರೊಂದಿಗೆ ಚರ್ಚಿಸಿದ್ದೆ. ನಿಗಮವು ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಇದರಿಂದ ಎಂಟಿಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆಯಲ್ಲಿ ಭಾಷಾ ಮಾಧ್ಯಮದಲ್ಲಿ ಬದಲಾವಣೆ ಮಾಡಿ ಇತರ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.