ಕರ್ನಾಟಕ

karnataka

ETV Bharat / state

ವಿದೇಶದಿಂದ ಹಾಲಿನ ಉತ್ಪನ್ನಗಳ ಆಮದು: ವಿಧಾನಸಭೆಯಲ್ಲಿ ಒಕ್ಕೊರಳ ವಿರೋಧ - kmf news

ಹಾಲಿನ ಉತ್ಪಾದನೆಯಲ್ಲಿ ನಾವು ದೇಶದಲ್ಲೇ 2 ನೇ ಸ್ಥಾನದಲ್ಲಿದ್ದೇವೆ. ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಎಂದು ಕಲಾಪದಲ್ಲಿ ಸದಸ್ಯರು ಒಕ್ಕೊರಳಿನಿಂದ ಆಗ್ರಹಿಸಿದ್ರು.

ವಿದೇಶದಿಂದ ಹಾಲಿನ ಉತ್ಪನ್ನಗಳ ಆಮದು

By

Published : Oct 12, 2019, 7:42 PM IST

ಬೆಂಗಳೂರು: ಹಾಲಿನ ಉತ್ಪನ್ನಗಳ ಆಮದಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಪಕ್ಷಭೇದ ಮರೆತು ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ವಿಪಕ್ಷದ ನಾಯಕ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಅನುದಾನ ಬೇಡಿಕೆಗಳ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ವೇಳೆ, ಹಾಲು ಉತ್ಪಾದಕರಿಗೆ ನೀಡಲಾಗುತ್ತಿರುವ 5 ರೂ. ಪ್ರೋತ್ಸಾಹ ಧನವನ್ನು ನಿಲ್ಲಿಸಬೇಡಿ. ಕಳೆದ ಸರ್ಕಾರ ಘೋಷಣೆ ಮಾಡಿದಂತೆ ಪ್ರತಿ ಲೀಟರ್​ಗೆ​ 6 ರೂ. ಕೊಡಿ ಎಂದಾಗ, ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದಾಗಿ ಪ್ರಸ್ತಾಪಿಸಿದೆ ಎಂದು ಚರ್ಚಾ ವಿಷಯವನ್ನು ಮುಂದಿಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್​ನ ವೆಂಕಟರಾವ್ ನಾಡಗೌಡ, ಕರ್ನಾಟಕದಲ್ಲೇ ಹಾಲಿನ ಉತ್ಪಾದನೆ ಹೆಚ್ಚಾಗಿದೆ. ಹಾಲಿನ ಉತ್ಪಾದನೆಯಲ್ಲಿ ದೇಶದಲ್ಲೇ ನಾವು 2ನೇ ಸ್ಥಾನದಲ್ಲಿದ್ದೇವೆ. ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸದಸ್ಯ ಸೋಮಶೇಖರ್ ರೆಡ್ಡಿ, ರಾಜ್ಯದಲ್ಲಿ 80 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೇಂದ್ರದ ನಿರ್ಧಾರದಿಂದ ರಾಜ್ಯದಲ್ಲಿ ಸಂಕಷ್ಟ ಎದುರಾಗಲಿದೆ. ಹಾಲಿನ ಉತ್ಪಾದನೆಗಳನ್ನು ಯಾವುದೇ ಕಾರಣಕ್ಕೂ ಆಮದು ಮಾಡಿಕೊಳ್ಳುವುದು ಬೇಡ. ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details