ಬೆಂಗಳೂರು: ಮೂತ್ರದ ಉರಿಯೂತದ ಹಿನ್ನೆಲೆ ಉಂಟಾದ ಜ್ವರದ ಕಾರಣ ಚಿಕಿತ್ಸೆಗಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿ ಇರುವ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಮೂತ್ರ ಸಂಬಂಧಿಸಿದ ಸಮಸ್ಯೆಯಿಂದ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ರಾತ್ರಿ 11:30 ರ ವೇಳೆಗೆ ತಮ್ಮ ಪತಿಯ ಜೊತೆ ಆಸ್ಪತ್ರೆಗೆ ಆಗಮಿಸಿದ ಅವರು ತಪಾಸಣೆಗೆ ಒಳಪಟ್ಟು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಪತ್ನಿ ತಮ್ಮ ನಿವಾಸಕ್ಕೆ ವಾಪಸ್ ತೆರಳಿದ್ದು, ಪುತ್ರ ಡಾ ಯತೀಂದ್ರ ಸದ್ಯ ಆಸ್ಪತ್ರೆಯಲ್ಲಿದ್ದು, ಸಿದ್ದರಾಮಯ್ಯ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.