ಬೆಂಗಳೂರು :ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ವಧರ್ಮ ಸಮನ್ವಯತೆ ಮೆರೆದಿದ್ದಾರೆ. ತಮ್ಮ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದ ಕ್ರಿಶ್ಚಿಯನ್ ಬಾಂಧವರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಕ್ರಿಸ್ಮಸ್ ಆಚರಿಸಿದ್ದಾರೆ. ಆನಂತರ ವೈಕುಂಠ ಏಕಾದಶಿ ಪ್ರಯುಕ್ತ ರಾಜಾಜಿನಗರ ಕೈಲಾಸ ವೈಕುಂಠ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಬೆಳಗ್ಗೆ ಕ್ರಿಶ್ಚಿಯನ್ ಧರ್ಮ ಗುರುಗಳು ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು.