ಕರ್ನಾಟಕ

karnataka

ETV Bharat / state

ಕಲಬುರಗಿ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ಸಿದ್ದರಾಮಯ್ಯ ಗೈರು: ಕಾರಣ? - ಬೆಂಗಳೂರು

ಮೈಸೂರು ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ನೆಗಡಿ, ಮೈ ಕೈ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಿಗದಿಯಾಗಿರುವ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ತೆರಳದಿರಲು ಕಡೆಯ ಕ್ಷಣದಲ್ಲಿ ನಿರ್ಧರಿಸಿದ್ದಾರೆ.

opposition leader  siddaramaiah
ಪ್ರತಿ ಪಕ್ಷನಾಯಕ ಸಿದ್ದರಾಮಯ್ಯ

By

Published : Jan 18, 2021, 1:12 PM IST

ಬೆಂಗಳೂರು:ಅನಾರೋಗ್ಯದ ಹಿನ್ನೆಲೆ ಇಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗೈರಾಗಿದ್ದಾರೆ.

ಮೈಸೂರು, ಬೆಂಗಳೂರು ಹಾಗೂ ಬೆಳಗಾವಿ ವಿಭಾಗದ ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಸಕ್ರಿಯವಾಗಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ನಾಲ್ಕನೆಯ ಸಂಕಲ್ಪ ಸಮಾವೇಶಕ್ಕೆ ತೆರಳಿಲ್ಲ. ನಿನ್ನೆ ಮೈಸೂರು ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ನೆಗಡಿ, ಮೈ ಕೈ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಿಗದಿಯಾಗಿರುವ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ತೆರಳದಿರಲು ಕಡೆಯ ಕ್ಷಣದಲ್ಲಿ ನಿರ್ಧರಿಸಿದ್ದಾರೆ. ಬೆಂಗಳೂರಿನ ಶಿವಾನಂದ ವೃತ್ತ ಸಮೀಪವಿರುವ ಸರ್ಕಾರಿ ನಿವಾಸದಲ್ಲಿ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದು, ಇಂದು ಮತ್ತು ನಾಳೆ ಯಾರನ್ನು ಅವರು ಭೇಟಿಯಾಗುವುದಿಲ್ಲ ಎಂದು ತಿಳಿಸಲಾಗಿದೆ.

ಓದಿ:ಕಲಬುರಗಿಯಲ್ಲಿ ಕಾಂಗ್ರೆಸ್ ಸಂಕಲ್ಪ ಸಮಾವೇಶಕ್ಕೆ ಸಕಲ ಸಿದ್ಧತೆ

ಕಳೆದ ಒಂದು ವಾರಗಳಿಂದ ನಿರಂತರವಾಗಿ ಹಲವಾರು ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದು, ಜೊತೆಗೆ ಕಳೆದ ರಾತ್ರಿ ಮೈಸೂರಿನಿಂದ ಬಂದಿರುವುದು ತಡವಾಗಿದೆ. ಸದ್ಯ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಕಾರ್ಯಕರ್ತರನ್ನು ಹಾಗೂ ಪಕ್ಷದ ವಿವಿಧ ನಾಯಕರನ್ನು ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಇಂದು ಬೆಳಗ್ಗೆ ಅವರ ಭೇಟಿಗೆ ಆಗಮಿಸಿದ ಕೆಲ ನಾಯಕರನ್ನು ಕೂಡ ಹಾಗೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗ್ತಿದೆ.

ABOUT THE AUTHOR

...view details