ಕರ್ನಾಟಕ

karnataka

ETV Bharat / state

ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ, ಜಂಬ ಪಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ - ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ

ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Mar 10, 2022, 3:15 PM IST

Updated : Mar 10, 2022, 3:26 PM IST

ಬೆಂಗಳೂರು: ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ ಅಷ್ಟೇ. ಇದರಿಂದ ಬಹಳ ಜಂಬ ಪಡುವ ಹಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ

ವಿಧಾನಸೌಧದಲ್ಲಿ ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಇನ್ನೂ ಪೂರ್ಣ ಫಲಿತಾಂಶ ಪ್ರಕಟವಾಗಿಲ್ಲ. ಪಂಜಾಬ್​​​​ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ. ಉತ್ತರಾಖಂಡ, ಗೋವಾದಲ್ಲಿ ಗೆಲುವಿನ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್​​ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದರು.

ಈ ಚುನಾವಣೆಗಳಿಂದ ನಾನೇನು ಬಹಳ ಏನು ನಿರೀಕ್ಷೆ ಇಟ್ಟಿರಲಿಲ್ಲ. ಆದ್ರೆ ಗೋವಾ, ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು. ಈ ಚುನಾವಣೆಯಿಂದ ಧೈರ್ಯ ಕಳೆದುಕೊಳ್ಳುವಂಥದ್ದೇನಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : ಪಂಜಾಬ್​ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು - ಇಲ್ಲೂ ಕಾಂಗ್ರೆಸ್ ಅವನತಿಯಾಗುತ್ತೆ: ಜಗದೀಶ್ ಶೆಟ್ಟರ್ ಲೇವಡಿ

Last Updated : Mar 10, 2022, 3:26 PM IST

For All Latest Updates

TAGGED:

ABOUT THE AUTHOR

...view details