ಕರ್ನಾಟಕ

karnataka

ETV Bharat / state

ಹೈಕೋರ್ಟ್ ತೀರ್ಪಿಗೆ ತಲೆ ಬಾಗಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ - ಕರ್ನಾಟಕ ಹೈಕೋರ್ಟ್ ಹಿಜಾಬ್ ತೀರ್ಪು

ನಾನು ಕೋರ್ಟ್ ಆದೇಶದ ಬಗ್ಗೆ ಕಾಮೆಂಟ್ ಮಾಡಲು ಹೋಗಲ್ಲ. ಹೈಕೋರ್ಟ್ ಏನು ಆದೇಶ ನೀಡಿದೆ ಎಂದು ಪೂರ್ಣವಾಗಿ ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

opposition leader siddaramaiah
ಪಕ್ಷ ನಾಯಕ ಸಿದ್ದರಾಮಯ್ಯ

By

Published : Mar 15, 2022, 12:38 PM IST

ಬೆಂಗಳೂರು:ಹಿಜಾಬ್ ಪ್ರಕರಣ ಸಂಬಂಧದ ಹೈಕೋರ್ಟ್ ನೀಡಿರುವ ತೀರ್ಪಿಗೆ ತಲೆ ಬಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋರ್ಟ್ ಏನು ಆದೇಶ ನೀಡಿದೆ ಎಂದು ಪೂರ್ಣವಾಗಿ ಗಮನಿಸಿಲ್ಲ. ಸದ್ಯ ನಾನು ಕೋರ್ಟ್ ಆದೇಶದ ಬಗ್ಗೆ ಕಾಮೆಂಟ್ ಮಾಡಲು ಹೋಗಲ್ಲ. ಹೈಕೋರ್ಟ್ ಏನು ಆದೇಶ ನೀಡಿದೆ ಎಂದು ಪೂರ್ಣವಾಗಿ ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಹಿಜಾಬ್ ತೀರ್ಪು- ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ

ತೀರ್ಪಿನಿಂದ ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷ ಆಗಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಹಿಜಾಬ್ ನಿಂದ ಯಾರಿಗೂ ತೊಂದರೆ ಆಗಲ್ಲ ಅಂತಾ ಹೇಳಿದ್ದೆವು. ಮೊದಲಿನಿಂದಲೂ ಅವರು ಹಿಜಾಬ್​​ ಧರಿಸುತ್ತ ಬಂದಿದ್ದಾರೆ. ಇದರಿಂದಾಗಿ ಯಾರಿಗೂ ತೊಂದರೆ ಆಗಲ್ಲ ಎಂದು ಹೇಳಿದ್ದೆವು. ಇದರಿಂದ ಕಪಾಳ ಮೋಕ್ಷ ಎಲ್ಲಿಂದ ಆಗುತ್ತದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಹಿಜಾಬ್​ ತೀರ್ಪು: ಸರ್ಕಾರ ಅಡ್ವೋಕೇಟ್ ಜನರಲ್ ಹೇಳಿದ್ದೇನು?

ABOUT THE AUTHOR

...view details