ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ಸ್ಫೋಟಗೊಂಡು 8 ಜನ ಕಾರ್ಮಿಕರು ಸಾವನ್ನಪ್ಪಿರುವ ಘಟನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲೆಟಿನ್ ಸಾಗಿಸುತ್ತಿದ್ದ ಲಾರಿ ಸ್ಫೋಟದಿಂದಾಗಿ ಶಿವಮೊಗ್ಗದಲ್ಲಿ ಕಾರ್ಮಿಕರ ಸಾವನ್ನಪ್ಪಿರುವ ಬಗ್ಗೆ ತಿಳಿದು ತುಂಬಾ ನೋವಾಗಿದೆ. ಈ ಘಟನೆಯ ಬಗ್ಗೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ಮತ್ತು ಕಠಿಣ ವಿಚಾರಣೆಯನ್ನು ಪ್ರಾರಂಭಿಸಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸಂತ್ರಸ್ತರ ಕುಟುಂಬ ಸದಸ್ಯರಿಗೆ ನನ್ನ ಸಾಂತ್ವನ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಕಾರ್ಮಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದು, ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು ಅನೇಕ ಕಾರ್ಮಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು. ಮೃತರ ಆತ್ಮಕೆ ಶಾಂತಿ ಕೋರುತ್ತಾ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲೆಂದು ಹಾರೈಸುತ್ತೇನೆ. ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.