ಬೆಂಗಳೂರು :ಕೊರೊನಾ ರಾಜ್ಯದಲ್ಲಿ ಕಡಿಮೆಯಾಗಿದೆ ಎಂಬ ತಪ್ಪು ಗ್ರಹಿಕೆಯಲ್ಲಿ ಜನ ಇದ್ದಾರೆಂದು ಹೇಳುವ ಮೂಲಕ ಸಚಿವ ಡಾ. ಕೆ ಸುಧಾಕರ್, ತಮ್ಮ ಬೇಜವಾಬ್ದಾರಿ ಪ್ರದರ್ಶನ ಮಾಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಆರೋಪಿಸಿದ್ದಾರೆ.
ಓದಿ: ಪ್ರವಾಸೋದ್ಯಮ ಉತ್ತೇಜಿಸಲು ಸ್ಟಾರ್ ಹೋಟೆಲ್ಗಳನ್ನು ಕೈಗಾರಿಕೆ ವ್ಯಾಪ್ತಿಗೆ ತರಲು ನಿರ್ಧಾರ: ಸಚಿವ ಯೋಗೇಶ್ವರ್
ನೆರೆಯ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಏರುಗತಿಯಲ್ಲಿದೆ. ರಾಜ್ಯದಲ್ಲೂ ಕೊರೊನಾ 2ನೇ ಅಲೆ ಕಾಣಿಸುವ ಸಾಧ್ಯತೆಗಳಿವೆ. ಕೊರೊನಾ ಕಡಿಮೆಯಾಯ್ತು ಎಂಬ ತಪ್ಪು ಗ್ರಹಿಕೆಯಲ್ಲಿ ಜನರಿದ್ದಾರೆಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಕೆಲಸ ಸರ್ಕಾರದ್ದು. ಕೊರೊನಾ ತಡೆಗೆ ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಭೆ ನಡೆಸಿದ ಸುಧಾಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂದರ್ಭ, ಬೆಂಗಳೂರಿನಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಹೀಗೆ ಬೇಜವಾಬ್ದಾರಿ ವಹಿಸುವುದು ಯಾರಿಗೂ ಒಳ್ಳೆಯದಲ್ಲ.
ರಾಜ್ಯದ ಜನರ ಆರೋಗ್ಯವೇ ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಮದುವೆಗಳಿಗೆ ಕೆಲವು ನಿಯಮಗಳು ಇವೆ. ಆದರೆ, ಎಗ್ಗಿಲ್ಲದೆ ಮದುವೆಗಳಿಗೆ ಜನರು ಸೇರುತ್ತಿದ್ದಾರೆ. ಕೊರೊನಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು.
ಮಾರ್ಚ್ ಅಂತ್ಯದವರೆಗೆ ಬಹಳ ಪ್ರಮುಖ ಘಟ್ಟವಾಗಿದೆ. ನಾವು ಕೊರೊನಾವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕೆಂದಿದ್ದಾರೆ. ಸಚಿವ ಈ ಹೇಳಿಕೆ ಉಡಾಫೆಯಿಂದ ಕೂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.