ಬೆಂಗಳೂರು :ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಹಿನ್ನೆಲೆ ಕರೆಯಲಾಗಿದ್ದ ಪ್ರತಿಪಕ್ಷ ನಾಯಕರ ಸಭೆಯಲ್ಲಿ, ಸಿದ್ದರಾಮಯ್ಯ ಅವರು ಹಾಸ್ಯ ಚಟಾಕಿ ಹಾರಿಸುವ ಮೂಲಕ ಎಲ್ಲರೂ ನಗೆಗಡಲಲ್ಲಿ ತೇಲುವಂತೆ ಮಾಡಿದರು.
ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ ಸಿದ್ದರಾಮಯ್ಯ - Assembly winter session
ಮಾಸ್ಕ್ ತೆಗೆಯದಿದ್ದರೂ ಅವರು ಮಲ್ಲಿಕಾರ್ಜುನ ಖರ್ಗೆ ಅನ್ನೋದು ಎಲ್ಲರಿಗೂ ಗೊತ್ತಾಗುತ್ತೆ ಬಿಡಿ ಎನ್ನುವ ಮೂಲಕ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿ, ಎಲ್ಲರೂ ನಗೆಗಡಲಲ್ಲಿ ತೇಲುವಂತೆ ಮಾಡಿದರು.
ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕರ ಸಭೆ
ಇದನ್ನೂ ಓದಿ: ನಾಳೆಯಿಂದ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಉಭಯ ಸದನಗಳ ಕಾಂಗ್ರೆಸ್ ನಾಯಕರ ಸಭೆ
ಸಭೆ ಆರಂಭದ ವೇಳೆ, ಎಲ್ಲರೂ ಮಾಸ್ಕ್ ತೆಗೆದು ಕೂತಿದ್ದರು. ಆದರೆ, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮಾತ್ರ ಮಾಸ್ಕ್ ತೆಗೆದಿರಲಿಲ್ಲ. ಈ ವೇಳೆ ಮಾಸ್ಕ್ ತೆಗೆಯುವಂತೆ ಮಾಧ್ಯಮ ಪ್ರತಿನಿಧಿಗಳು ಮನವಿ ಮಾಡಿದರು. ಖರ್ಗೆ ಮಾಸ್ಕ್ ತೆಗೆಯಲು ಮುಂದಾದಾಗ ಹಾಸ್ಯ ಚಟಾಕಿ ಹಾರಿಸಿದ ಸಿದ್ದರಾಮಯ್ಯ, ಮಾಸ್ಕ್ ತೆಗೆಯದೆ ಇದ್ದರೂ ಅವರು ಖರ್ಗೆ ಅಂತ ಎಲ್ಲರಿಗೂ ಗೊತ್ತಾಗುತ್ತೆ ಅಂದ್ರು. ಸಿದ್ದರಾಮಯ್ಯ ಅವರ ಮಾತಿಗೆ ಸಭೆಯಲ್ಲಿದ್ದವರು ನಗೆಗಡಲಲ್ಲಿ ತೇಲಿದರು.