ಬೆಂಗಳೂರು:ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟಕ್ಕೆ ಇಳಿಯಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ: ಹೋರಾಟದ ಕುರಿತು ಕಾಂಗ್ರೆಸ್ ನಾಯಕರಿಂದ ಚರ್ಚೆ
ವಿಧಾನಸೌಧದ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಪಕ್ಷಯದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚಿಸಲಾಯಿತು.
ವಿಧಾನಸೌಧದ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಪಕ್ಷಯದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಹಿರಿಯ ಮುಖಂಡ, ರಾಜ್ಯಸಭೆ ನೂತನ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ಶಾಸಕ ಅಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ತರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತೀರ್ಮಾನ ಮಾಡಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು, ಹೋರಾಟದ ರೂಪುರೇಷಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.