ಬೆಂಗಳೂರು:ರಾಜ್ಯಾದ್ಯಂತ ಮಾನ್ಸೂನ್ ಚುರುಕಾಗಿದ್ದು ವ್ಯಾಪಕ ಮಳೆಯಾಗಿದೆ. ಸಿದ್ಧಾಪುರದಲ್ಲಿ 20 ಸೆಂ.ಮೀ, ಯಲ್ಲಾಪುರ 18 ಸೆಂ.ಮೀ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ 10 ಸೆಂ.ಮೀ, ಬೆಳಗಾವಿ 9 ಸೆಂ.ಮೀ , ಭಾಗಮಂಡಲ 49 ಸೆಂ.ಮೀ, ಕೊಟ್ಟಿಗಾರದಲ್ಲಿ 38 ಸೆಂ.ಮೀ , ಹುಂಚದಕಟ್ಟೆಯಲ್ಲಿ 16 ಸೆಂ.ಮೀ, ಜಯಪುರ 18 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಅಲ್ಲಲ್ಲಿ 20 ಸೆಂ.ಮೀಟರ್‌ಗಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 6 ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 7ರಿಂದ 10ರವರೆಗೆ ಉತ್ತರ ಕನ್ನಡ, ಉಡುಪಿ, ದ.ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಆಗಸ್ಟ್ 6, 9 ಹಾಗೂ 10 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ಆಗಸ್ಟ್ 7 ,8 ರಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 6 ರಂದು ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ನಿರೀಯಿರುವುದರಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 6 ರಿಂದ 10 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ ,ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಿರುವುದರಿಂದ ಎಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಆಗಸ್ಟ್ 6 ಹಾಗೂ 7 ರಂದು ಮಳೆಯಾಗಲಿದೆ
ಕರಾವಳಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ನೀರಿಗೆ ಇಳಿಯಬಾರದೆಂದು ಎಚ್ಚರಿಸಲಾಗಿದೆ ಎಂದರು.