ಕರ್ನಾಟಕ

karnataka

ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ

By

Published : Jul 19, 2023, 10:21 PM IST

ಕರಾವಳಿಯ ಕೆಲವು ಜೆಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ​

ಹವಾಮಾನ ವಿಜ್ಞಾನಿ ಎ ಪ್ರಸಾದ್
ಹವಾಮಾನ ವಿಜ್ಞಾನಿ ಎ ಪ್ರಸಾದ್

ಹವಾಮಾನ ವಿಜ್ಞಾನಿ ಎ ಪ್ರಸಾದ್

ಬೆಂಗಳೂರು: ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೆರಡು ದಿನ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ ಮೀ ಇಂದ 55 ಕಿ ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯ ಪ್ರಮಾಣ: ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್​ನಲ್ಲಿ 24 ಸೆ. ಮೀ, ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 15 ಸೆ. ಮೀ, ಯಲ್ಲಾಪುರ ಮತ್ತು ಜೋಯಿಡಾದಲ್ಲಿ ಕ್ರಮವಾಗಿ 14 ಮತ್ತು 12 ಸೆ. ಮೀ ಮಳೆಯಾಗಿದೆ.

ಮಳೆಗೆ ಉರುಳಿ ಬಿದ್ದ ನೂರಾರು ಮಳೆ : ಇನ್ನೊಂದೆಡೆ ರಾಜಧಾನಿ ಬೆಂಗಳೂರಿನಲ್ಲಿ (ಮೇ 22-2023) ಸುರಿದ ಆಲಿಕಲ್ಲು ಸಹಿತ ಮಳೆಗೆ 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿದ್ದವು. 1600ಕ್ಕೂ ಅಧಿಕ ರೆಂಬೆಗಳು ಮುರಿದು ರಸ್ತೆಗೆ ಬಿದ್ದಿದ್ದವು. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿದ್ದವು. ಎರಡು ದಿನದ ಮಳೆಗೆ ತತ್ತರಿಸುತ್ತಿರುವ ತ್ಯಾಜ್ಯ ವಿಲೇವಾರಿಗೆ ಪೌರಕಾರ್ಮಿಕರು ಪರದಾಟ ನಡೆಸುತ್ತಿದ್ದು, ಹಲವು ಪ್ರಮುಖ ರಸ್ತೆಗಳು ತಿಪ್ಪೆ ಗುಂಡಿಯಾಗಿ ಮಾರ್ಪಟ್ಟಿದ್ದವು.

ಬಿಬಿಎಂಪಿಗೆ 600ಕ್ಕೂ ಅಧಿಕ ದೂರು: ಎರಡು ದಿನದ ಭಾರಿ ಮಳೆಗೆ ನಗರದಲ್ಲಿ 400ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದವು. 1600ಕ್ಕೂ ಅಧಿಕ ಮರಗಳ ಕೊಂಬೆ ಮುರಿದಿದ್ದವು. ರಸ್ತೆಗೆ ಬಿದ್ದ ಮರಗಳು ವಾಹನ ಸವಾರರು, ಸಾರ್ವಜನಿಕರು ಪರದಾಡಿದ್ದರು. ಈ ಸಂಬಂಧ ಬಿಬಿಎಂಪಿಗೆ 600ಕ್ಕೂ ಅಧಿಕ ದೂರುಗಳು ಬಂದಿದ್ದವು.

ಎರಡು ದಿನದ ಮಳೆಗೆ ನಗರದ 70ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿತ್ತು. ಮಹಾಲಕ್ಷ್ಮಿ ಲೇಔಟ್ ಒಂದರಲ್ಲೇ 20ಕ್ಕೂ ಅಧಿಕ ಕಡೆ ಮನೆಗಳಿಗೆ ನೀರು ನುಗ್ಗಿತ್ತು. ನಾಗರಿಕರು ದೂರು ನೀಡಿರುವ ಹಿನ್ನೆಲೆ ಬಿಬಿಎಂಪಿ 200 ಕ್ಕೂ ಹೆಚ್ಚು ಕಡೆ ಮರಗಳ ತೆರವು ಕಾರ್ಯಾಚರಣೆ ನಡೆಸಿದೆ. 50 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಕೆಲಸ ಮಾಡಿದ್ದರು.

ಗಾಳಿ ಸಹಿತ ಭಾರಿ ಮಳೆಗೆ ಕೆ ಆರ್ ಸರ್ಕಲ್, ಸರ್‌ ಎಂ ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ ಬಳಿ ಬೃಹತ್ ಗಾತ್ರದ ಮರ ಧರೆಗೆ ಉರುಳಿತ್ತು. ಆನಂದ್ ರಾವ್ ಸರ್ಕಲ್ ವಿವಿಡಾಸ್ ಹೋಟೆಲ್ ಮುಂದೆಯೂ ಭಾರಿ ಗಾತ್ರದ ಮರ ಧರೆಗೆ ಉರುಳಿತ್ತು. ಐಷಾರಾಮಿ ಕಾರಿನ ಮೇಲೆ ಮರ ಉರುಳಿದ ಪರಿಣಾಮ ಸ್ಥಳದಲ್ಲಿ ಪಾರ್ಕ್ ಮಾಡಿದ್ದ ಐಷಾರಾಮಿ ಕಾರು ನಜ್ಜು ಗುಜ್ಜಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.

ಇದನ್ನೂ ಓದಿ:ಎರಡು ದಿನದ ಮಳೆಗೆ ನಗರದಲ್ಲಿ ಉರುಳಿ ಬಿದ್ದಿವೆ ನೂರಾರು ಮರಗಳು!

ABOUT THE AUTHOR

...view details