ಬೆಂಗಳೂರು:ಇಂದಿನಿಂದ ಅಕ್ಟೋಬರ್ 17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಕ್ಕೆ ಮಳೆ ಮುನ್ಸೂಚನೆ: 10 ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ - ಬೆಂಗಳೂರು ಸುದ್ದಿ
ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. 10 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
![ರಾಜ್ಯಕ್ಕೆ ಮಳೆ ಮುನ್ಸೂಚನೆ: 10 ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ orange-alert-for-next-three-days-in-10-district](https://etvbharatimages.akamaized.net/etvbharat/prod-images/768-512-13362426-thumbnail-3x2-bn.jpg)
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಮತ್ತು ಶನಿವಾರ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.