ಕರ್ನಾಟಕ

karnataka

ETV Bharat / state

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದಿಂದ ಆದೇಶ - ಪುರಸಭೆಗಳ ಕಾಯ್ದೆ 1964 ರ ನಿಯಮ-42 (ಕಲಂ 5)

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾಯಿತ ಕೌನ್ಸಿಲ್ ಅವಧಿಯು ಮುಕ್ತಾಯಗೊಳ್ಳಲಿದ್ದು, ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ದೈನಂದಿನ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಸಂಗ್ರಹ ಚಿತ್ರ_ವಿಧಾನಸೌಧ

By

Published : Mar 13, 2019, 7:11 PM IST

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಚುನಾಯಿತ ಕೌನ್ಸಿಲ್ ಅವಧಿಯು ಮಾರ್ಚ್, ಏಪ್ರಿಲ್ ಹಾಗೂ ಮೇ-2019ರಲ್ಲಿ ಮುಕ್ತಾಯಗೊಳ್ಳಲಿದ್ದು, ಹೊಸದಾಗಿ ವಾರ್ಡ್​ವಾರು ಚುನಾವಣೆ ನಡೆಸುವುದು ಅವಶ್ಯಕ. ಅವಧಿ ಮುಕ್ತಾಯಗೊಳ್ಳಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಿ, ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ದೈನಂದಿನ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್-315 ರ ಅನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಕಾರ್ಯನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ಅವಕಾಶವಿರುತ್ತದೆ.

ಕರ್ನಾಟಕ ಪುರಸಭೆಗಳ ಕಾಯ್ದೆ 1964 ರ ನಿಯಮ-42 (ಕಲಂ 5) ರಲ್ಲಿ ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಲಾಗಿದೆ. ಹಾಗೂ ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನ ಖಾಲಿ ಇರುವ ಅವಧಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದ್ದು, ಅದರನ್ವಯ ನಗರಸಭೆಗಳಿಗೆ ಡೆಪ್ಯುಟಿ ಕಮಿಷನರ್ ಅಥವಾ ಸಮಾನ ದರ್ಜೆಯ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಪುರಸಭೆಗಳಿಗೆ ಸಂಬಂಧಿಸಿದಂತೆ ಅಸಿಸ್ಟೆಂಟ್ ಕಮಿಷನರ್ ದರ್ಜೆಗೆ ಕಡಿಮೆ ಇಲ್ಲದ ಅಧಿಕಾರಿ ಹಾಗೂ ಜಿಲ್ಲಾ ಮುಖ್ಯಸ್ಥ ಕಾರ್ಯ ಸ್ಥಾನದಲ್ಲಿನ ಮುನಿಸಿಪಲ್ ಕೌನ್ಸಿಲ್ ತಹಶೀಲ್ದಾರ್ ಅಥವಾ ಸಮಾನ ದರ್ಜೆಯ ಅಧಿಕಾರಿಗಳು ಮತ್ತು ಇತರೇ ಮುನ್ಸಿಪಲ್ ಕೌನ್ಸಿಲ್​ಗಳ ಸಂದರ್ಭದಲ್ಲಿ (ಪಟ್ಟಣ ಪಂಚಾಯಿತಿ) ತಹಶೀಲ್ದಾರ್​ಗಳು ಆಡಳಿತಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಕರ್ನಾಟಕ ಪುರಸಭೆಗಳ ಕಾಯ್ದೆ 1964 ರ ನಿಯಮ 315 ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಅವಧಿ ಮುಕ್ತಾಯವಾಗಲಿರುವ / ಹೊಸದಾಗಿ ವಾರ್ಡ್​ವಾರು ಚುನಾವಣೆ ನಡೆಸಬೇಕಾಗಿರುವ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಿಗೆ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಅಂದರೆ, ಅಧ್ಯಕ್ಷ/ ಉಪಾಧ್ಯಕ್ಷ ಚುನಾವಣೆ ನಡೆಯುವವರೆಗೆ ಕಾರ್ಯನಿರ್ವಹಣೆಗಾಗಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಸಂಬಂಧಪಟ್ಟ ಜಿಲ್ಲಾ/ ಉಪ ವಿಭಾಗ/ ತಾಲೂಕು/ ಪ್ರದೇಶ ವ್ಯಾಪ್ತಿಯ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್​ಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ಆದೇಶಿಸಲಾಗಿದೆ.

ABOUT THE AUTHOR

...view details