ಬೆಂಗಳೂರು: ರಾಜ್ಯದ ಕರಾವಳಿ ಮಲೆನಾಡಿನ ಜಿಲ್ಲೆಗಳ ಪ್ರವಾಹ ಹಾನಿ ಮತ್ತು ಭೂ ಕುಸಿತದಿಂದಾಗಿ ಶೈಕ್ಷಣಿಕ ದಾಖಲೆಗಳನ್ನು ಕಳೆದುಕೊಂಡ ಅಭ್ಯರ್ಥಿಗಳಿಗೆ ಉಚಿತವಾಗಿ ಬದಲಿ ಶೈಕ್ಷಣಿಕ ದಾಖಲೆಗಳನ್ನು ಒದಗಿಸುವಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲ ತಿಳಿಸಿದ್ದಾರೆ.
ನೆರೆಯಿಂದ ದಾಖಲೆಗಳನ್ನು ಕಳ್ಕೊಂಡವರಿಗೆ ಉಚಿತ SSLC ಮಾರ್ಕ್ಸ್ ಕಾರ್ಡ್ ವಿತರಣೆ - secondary school of board of education
ರಾಜ್ಯದ ಕರಾವಳಿ ಮಲೆನಾಡಿನ ಜಿಲ್ಲೆಗಳ ಪ್ರವಾಹ ಹಾನಿ ಮತ್ತು ಭೂ ಕುಸಿತದಿಂದಾಗಿ ಶೈಕ್ಷಣಿಕ ದಾಖಲೆಗಳನ್ನು ಕಳೆದುಕೊಂಡ ಅಭ್ಯರ್ಥಿಗಳಿಗೆ ಉಚಿತವಾಗಿ ಬದಲಿ ಶೈಕ್ಷಣಿಕ ದಾಖಲೆಗಳನ್ನು ಒದಗಿಸುವಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಮಂಡಳಿಯಿಂದ ವಿತರಿಸಲಾದ ಯಾವುದೇ ಶೈಕ್ಷಣಿಕ ದಾಖಲೆಗಳನ್ನು ವಿದ್ಯಾರ್ಥಿಗಳು ಅಥವಾ ಪೋಷಕರು ಅರ್ಜಿ ಸಲ್ಲಿಸಿದ್ದಲ್ಲಿ ಹಾಗೂ ಶಾಲಾ ಆಡಳಿತ ಮಂಡಳಿಯ ಮುಖ್ಯ ಶಿಕ್ಷಕರು ಫಲಿತಾಂಶ ಪಟ್ಟಿ ಕೋರಿದ್ದಲ್ಲಿ ಅಂತಹ ಅರ್ಜಿಗಳಿಗೆ ಯಾವುದೇ ಶುಲ್ಕವನ್ನು ಪಡೆಯದೆ ಉಚಿತವಾಗಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಅಂಕಪಟ್ಟಿ ವಿತರಿಸುವಂತೆ ಸೂಚನೆ ನೀಡಲಾಗಿದೆ. ಮೈಸೂರು, ಬೆಳಗಾವಿ, ಕಲ್ಬುರ್ಗಿ ವಿಭಾಗದಲ್ಲಿರುವ ವಿಭಾಗೀಯ ಕಾರ್ಯದರ್ಶಿಗಳಿಗೆ ತುರ್ತು ಕ್ರಮ ವಹಿಸುವಂತೆ ಆದೇಶಿಸಲಾಗಿದೆ ಎಂದು ವಿ.ಸುಮಂಗಲ ತಿಳಿಸಿದ್ದಾರೆ.