ಬೆಂಗಳೂರು:ಕೊರೊನಾ ವಿರುದ್ಧ ಹೋರಾಟದಲ್ಲಿ ಗ್ರೂಪ್ ಡಿ ನೌಕರರ ಪಾತ್ರ ಪ್ರಮುಖವಾದದ್ದು. ಕೋವಿಡ್ ನಿಯಂತ್ರಣ ಮಾಡಲು ಕೆಲಸ ಮಾಡುತ್ತಿರುವ ಅವರ ಕಾರ್ಯಕ್ಕೆ ಪ್ರೋತ್ಸಾಹ ಕೊಡುವ ದೃಷ್ಟಿಯಿಂದ 10,000 ರೂ. ಹೆಚ್ಚುವರಿ ಅಪಾಯ ಭತ್ಯೆ ನೀಡಲು ಆದೇಶಿಸಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಇನ್ನು ಕೊರೊನಾ ವಾರಿಯರ್ಗಳನ್ನು ಸಚಿವ ಸುಧಾಕರ್ ವಿಷಕಂಠನಿಗೆ ಹೋಲಿಸಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೇ ಜನರ ಜೀವಕ್ಕಾಗಿ ಹೋರಾಡುತ್ತಿದ್ದಾರೆ. ಅವರಿಗೆ ಸೆಲ್ಯೂಟ್ ಹೊಡೆಯಲೇಬೇಕು, ಗೌರವ ಕೊಡಬೇಕು ಎಂದರು.
ಇನ್ನು ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಲ್ಯಾಬ್ ಸ್ಥಾಪಿಸುವಂತೆ ಸೂಚಿಸಲಾಗಿತ್ತು. ಹೀಗಾಗಿ ಇಂದು ಕಾಲೇಜಿನ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು 10 ದಿನಗಳಲ್ಲಿ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.