ಬೆಂಗಳೂರು:ರಾಜ್ಯದಲ್ಲಿ ವಾರಾಂತ್ಯದಲ್ಲೂ ಎಲ್ಲಾ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಹಿಂದಿನ ಆದೇಶವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.
ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯ ನಿರ್ವಹಿಸುವಂತೆ ಜ.4ರಂದು ಸೂಚಿಸಲಾಗಿತ್ತು. ಅದರಂತೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸಲು ನಿರ್ದೇಶನ ನೀಡಲಾಗಿತ್ತು.
ಆದರೆ ಇದೀಗ ಸರ್ಕಾರ ಆ ಆದೇಶವನ್ನು ಹಿಂಪಡೆದಿದೆ. ವಾರಾಂತ್ಯದಲ್ಲಿ ಅಂದರೆ ಶನಿವಾರವೂ ಎಂದಿನಂತೆ ಕಚೇರಿ ಕಾರ್ಯನಿರ್ವಹಣೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೂಚನೆ ನೀಡಿದ್ದಾರೆ.