ಬೆಂಗಳೂರು:ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೇರಲಾದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕೊಡಗು, ದ.ಕನ್ನಡ, ಉಡುಪಿ, ಹಾಸನದಲ್ಲಿ ವೀಕೆಂಡ್ ಕರ್ಫ್ಯೂ ರದ್ದು - ವೀಕೆಂಡ್ ಕರ್ಫ್ಯೂ ತೆರವು ಮಾಡಿ ಸರ್ಕಾರ ಆದೇಶ
ಕೋವಿಡ್ ಪಾಸಿಟಿವಿಟಿ ದರ 2% ಇಳಿಕೆ ಕಂಡ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೇರಲಾದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಳಿದಂತೆ ಈ ಹಿಂದಿನ ಕೋವಿಡ್ ನಿರ್ಬಂಧಗಳು ಮುಂದುವರಿಯಲಿವೆ.
ವೀಕೆಂಡ್ ಕರ್ಫ್ಯೂ ತೆರವು ಮಾಡಿ ಸರ್ಕಾರ ಆದೇಶ
ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ 2% ಇಳಿಕೆ ಕಂಡಿದ್ದು ಸರ್ಕಾರ ಈ ಆದೇಶ ಹೊರಡಿಸಿದೆ. ಒಂದು ವೇಳೆ ಕೋವಿಡ್ ಪ್ರಕರಣ ಹೆಚ್ಚಳವಾದರೆ ಜಿಲ್ಲಾಧಿಕಾರಿಗಳು ಕರ್ಫ್ಯೂ ಹೇರಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಉಳಿದಂತೆ ಗಡಿಯಲ್ಲಿ ಚೆಕ್ ಪೋಸ್ಟ್ಗಳಲ್ಲಿ ಕಠಿಣ ನಿಗಾ ಇರಿಸಲು ಸೂಚಿಸಲಾಗಿದೆ. ಉಳಿದಂತೆ ಈ ಹಿಂದಿನ ಕೋವಿಡ್ ನಿರ್ಬಂಧಗಳು ಮುಂದುವರಿಯಲಿವೆ.